HEALTH TIPS

ಹಳಿ ತಪ್ಪಿದ ಚಾರ್​ಮಿನಾರ್ ಎಕ್ಸ್‌ಪ್ರೆಸ್ ರೈಲು: 6 ಜನರಿಗೆ ಗಾಯ

               ಹೈದರಾಬಾದ್‌: ಚಾರ್​ಮಿನಾರ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ 6 ಜನರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

              ಬುಧವಾರ ಬೆಳಗ್ಗೆ ಇಲ್ಲಿನ ನಾಂಪಲ್ಲಿಯ ಡೆಕ್ಕನ್‌ ರೈಲು ನಿಲ್ದಾಣದ ಬಳಿ ಚೆನ್ನೈ-ಹೈದರಾಬಾದ್‌ ಚಾರ್​ಮಿನಾರ್ ಎಕ್ಸ್‌ಪ್ರೆಸ್ ರೈಲಿನ ಎರಡು ಭೋಗಿಗಳು ಹಳಿ ತಪ್ಪಿವೆ.

                ಘಟನೆಯಲ್ಲಿ ದೊಡ್ಡ ಅನಾಹುತ ಸಂಭವಿಸಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ರೈಲು ಕಡಿಮೆ ವೇಗದಲ್ಲಿ ಚಲಿಸುತ್ತಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಗಾಯಗೊಂಡ 6 ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries