HEALTH TIPS

ಬಾನು ಪ್ರಕರಣದ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ್ದ ಅರ್ಜಿ ತೀರ್ಪು ಜ.8ಕ್ಕೆ

            ವದೆಹಲಿ: ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿದ್ದ ಅರ್ಜಿಗಳ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್‌ ಇದೇ 8ರಂದು ಪ್ರಕಟಿಸಲಿದೆ.

          ಬಿಲ್ಕಿಸ್‌ ಬಾನು ಮತ್ತು ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್‌ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠವು ಅಕ್ಟೋಬರ್‌ 12ರಂದು ತೀರ್ಪನ್ನು ಕಾಯ್ದಿರಿಸಿತ್ತು.

           ಅಪರಾಧಿಗಳ ಕೃತ್ಯವು ಘೋರ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಪೀಠವು, 'ಈ ಪ್ರಕರಣದಲ್ಲಿ ನಾವು ಭಾವನೆಗಳ ಆಧಾರದಲ್ಲಿ ಯಾವುದೇ ನಿರ್ಣಯ ಕೈಗೊಳ್ಳುವುದಿಲ್ಲ. ಎಲ್ಲವನ್ನೂ ಕಾನೂನಿನ ಅಡಿಯಲ್ಲೇ ತೀರ್ಮಾನಿಸಲಿದ್ದೇವೆ' ಎಂದು ಹೇಳಿತ್ತು.

           ನ್ಯಾಯಮೂರ್ತಿ ಕೆ.ಎಂ. ಜೋಸೆಫ್‌ ಅವರು ನಿವೃತ್ತರಾಗುವವರೆಗೆ ಅವರ ನೇತೃತ್ವದ ನ್ಯಾಯಪೀಠವು ಈ ಪ್ರಕರಣದ ವಿಚಾರಣೆಯನ್ನು ನಡೆಸಿತ್ತು.

           ಬಿಲ್ಕಿಸ್ ಬಾನು ಅವರಲ್ಲದೆ ಸಿಪಿಎಂ ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್‌, ಲಖನೌ ವಿಶ್ವವಿದ್ಯಾಲಯದ ಮಾಜಿ ಕುಲಪತಿ ರೂಪ್‌ ರೇಖಾ ವರ್ಮಾ, ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರೂ ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries