ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಕೇರಳ, ಛತ್ತೀಸಗಢ ಹಾಗೂ ಹಿಮಾಚಲ ಪ್ರದೇಶ ಸೇರಿದಂತೆ 8 ರಾಜ್ಯಗಳಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಗಳನ್ನು ರಚಿಸಿದೆ. ಜತೆಗೆ ಮಧ್ಯಪ್ರದೇಶಕ್ಕೆ ರಾಜಕೀಯ ವ್ಯವಹಾರಗಳ ಸಮಿತಿಯನ್ನೂ ರಚಿಸಿದೆ.
0
samarasasudhi
ಜನವರಿ 07, 2024
ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಕೇರಳ, ಛತ್ತೀಸಗಢ ಹಾಗೂ ಹಿಮಾಚಲ ಪ್ರದೇಶ ಸೇರಿದಂತೆ 8 ರಾಜ್ಯಗಳಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಗಳನ್ನು ರಚಿಸಿದೆ. ಜತೆಗೆ ಮಧ್ಯಪ್ರದೇಶಕ್ಕೆ ರಾಜಕೀಯ ವ್ಯವಹಾರಗಳ ಸಮಿತಿಯನ್ನೂ ರಚಿಸಿದೆ.
ರಾಜಸ್ಥಾನ, ಕೇರಳ, ತೆಲಂಗಾಣ, ಛತ್ತೀಸಗಢ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ ಮತ್ತು ತ್ರಿಪುರಾದಲ್ಲಿ ಪ್ರದೇಶ ಚುನಾವಣಾ ಸಮಿತಿ ಹಾಗೂ ಮಧ್ಯಪ್ರದೇಶದಲ್ಲಿ ರಾಜಕೀಯ ವ್ಯವಹಾರಗಳ ಸಮಿತಿ ರಚನೆಯ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷರು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ ಎಂದು ಪಕ್ಷದ ಅಧಿಕೃತ ಹೇಳಿಕೆ ತಿಳಿಸಿದೆ.
ರಾಜಸ್ಥಾನ ಪಿಸಿಸಿ ಮುಖ್ಯಸ್ಥ ಗೋವಿಂದ್ ಸಿಂಗ್ ಧೊಟಾಸರಾ ಅವರನ್ನು ರಾಜ್ಯದಲ್ಲಿ ಪ್ರದೇಶ ಚುನಾವಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಸಮಿತಿಯ ಸದಸ್ಯರಾಗಿದ್ದಾರೆ.
ಮಹೇಂದ್ರಜೀತ್ ಸಿಂಗ್ ಮಾಳವೀಯ, ಮೋಹನ್ ಪ್ರಕಾಶ್, ಸಿ.ಪಿ ಜೋಶಿ, ಹರೀಶ್ ಚೌಧರಿ, ರಾಮಲಾಲ್, ಪ್ರಮೋದ್ ಜೈನ್, ಪ್ರತಾಪ್ ಸಿಂಗ್ ಖಚರಿಯಾವಾಸ್, ಮಮತಾ ಭೂಪೇಶ್, ಭಜನ್ ಲಾಲ್ ಜಾತವ್, ಮುರಾರಿ ಲಾಲ್ ಮೀನಾ, ಅಶೋಕ್ ಚಂದನಾ, ನೀರಜ್ ಡಾಂಗಿ, ಜುಬೇರ್ ಖಾನ್, ಧೀರಜ್ ಶರ್ಜಾರ್, ರೋಹಿತ್ ಬೋಹ್ರಾ, ಇಂದ್ರ ಮೀನಾ, ಡುಂಗರ್ ರಾಮ್ ಗೆದರ್, ಶಿಮ್ಲಾ ದೇವಿ ನಾಯಕ್ ಮತ್ತು ಲಲಿತ್ ಯಾದವ್ ಕೂಡ ಸಮಿತಿಯ ಸದಸ್ಯರಾಗಿದ್ದಾರೆ.
ಅವರಲ್ಲದೆ, ಯುವ ಕಾಂಗ್ರೆಸ್ ಅಧ್ಯಕ್ಷರು, ಎನ್‌ಎಸ್‌ಯುಐ ಅಧ್ಯಕ್ಷರು, ಸೇವಾದಳದ ಮುಖ್ಯ ಸಂಘಟಕರು ಮತ್ತು ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಸಮಿತಿಯ ಸದಸ್ಯರಾಗಿದ್ದಾರೆ.