ಚಾಯ್‌ಬಸಾ: ಪೊಲೀಸ್ ಮಾಹಿತಿದಾರನೆಂಬ ಕಾರಣಕ್ಕೆ ನಕ್ಸಲರು ಜಾರ್ಖಂಡ್‌ನ ಪಶ್ಚಿಮ ಸಿಂಘಭೂಮ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಬುಧವಾರ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
0
samarasasudhi
ಜನವರಿ 11, 2024
ಚಾಯ್‌ಬಸಾ: ಪೊಲೀಸ್ ಮಾಹಿತಿದಾರನೆಂಬ ಕಾರಣಕ್ಕೆ ನಕ್ಸಲರು ಜಾರ್ಖಂಡ್‌ನ ಪಶ್ಚಿಮ ಸಿಂಘಭೂಮ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಬುಧವಾರ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹತ್ಯೆಗೊಳಗಾದ ವ್ಯಕ್ತಿಯನ್ನು ನೆಲ್ಸನ್ ಭೆಂಗ್ರಾ ಎಂದು ಗುರುತಿಸಲಾಗಿದ್ದು, ಅವರನ್ನು ಮಂಗಳವಾರ ತಡರಾತ್ರಿ ಹತ್ಯೆ ಮಾಡಲಾಗಿದೆ.
ಮೃತ ನೆಲ್ಸನ್ ಹಿಂದೆ ನಿಷೇಧಿತ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದು, ನಕ್ಸಲರು ಅವರ ಮನೆಗೂ ಭೇಟಿ ನೀಡುತ್ತಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ತಿಳಿಸಿದ್ದಾರೆ.
ನಕ್ಸಲ್ ಸಂಘಟನೆಯೊಂದಿಗೆ ಸಂಬಂಧ ಕಡಿದುಕೊಂಡಿದ್ದ ನೆಲ್ಸನ್, ನಂತರ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ರಾತ್ರಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದರು ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯ ಸ್ಥಳದಲ್ಲಿ ಕರಪತ್ರಗಳನ್ನು ಎಸೆದಿರುವ ನಕ್ಸಲರು, ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.