ಬದಿಯಡ್ಕ: ಉಕ್ಕಿನಡ್ಕದ ಕಾಸರಗೋಡು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ವಿಭಾಗಗಳಲ್ಲಿ ಜೂನಿಯರ್ ರೆಸಿಡೆಂಟ್ ಹುದ್ದೆಗಳು ಖಾಲಿ ಇದೆ. ಅರ್ಹತೆ ಎಮ್.ಬಿ.ಬಿ.ಎಸ್, ಟಿ.ಸಿ.ಎಮ್.ಸಿ ರಿಜಿಸ್ಟ್ರೇಷನ್ ಆಗಿರಬೇಕು. ಜನವರಿ 10 ರಂದು ಬೆಳಿಗ್ಗೆ 11 ಕ್ಕೆ ಕಾಸರಗೋಡು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಉಕ್ಕಿನಡ್ಕದಲ್ಲಿರುವ ಸೂಪರಿಂಟೆಂಡೆಂಟ್ ಕಛೇರಿಯಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆ ಮತ್ತು ಕೆಲಸದ ಅನುಭವವನ್ನು ಸಾಬೀತುಪಡಿಸಲು ಅಗತ್ಯ ಪ್ರಮಾಣಪತ್ರಗಳು ಮತ್ತು ಅದರ ಪ್ರತಿಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ವಿದ್ಯಾರ್ಹತೆಯಿರುವ ಅಭ್ಯರ್ಥಿಗಳಿಗೆ ಮತ್ತು ಕೆಲಸದ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

