HEALTH TIPS

'ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ' ಘೋಷಿಸಿದ ಮೋದಿ

                ವದೆಹಲಿ: ರಾಮಮಂದಿರ ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ಹೊಸ ಯೋಜನೆಯೊಂದನ್ನು ಘೋಷಣೆ ಮಾಡಿದ್ದಾರೆ.


              ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ 'ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ'. ಈ ಯೋಜನೆಯಡಿ 1 ಕೋಟಿ ಮನೆಗಳಿಗೆ ಸೌರಫಲಕಗಳನ್ನು ಅಳವಡಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

           ಪ್ರಪಂಚದ ಎಲ್ಲಾ ಭಕ್ತರು ಸೂರ್ಯವಂಶಸ್ಥ ಭಗವಾನ್ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಸೋಮವಾರ ಅಯೋಧ್ಯೆಯಲ್ಲಿ ಪ್ರಾಣ-ಪ್ರತಿಷ್ಠಾಪನೆಯ ಶುಭ ಸಂದರ್ಭದಲ್ಲಿ ನನ್ನ ಸಂಕಲ್ಪ ಮತ್ತಷ್ಟು ಬಲಗೊಂಡಿದೆ.

              ರಾಮ ಮಂದಿರ ಉದ್ಘಾಟನೆ ಬಳಿಕ ನಮ್ಮ ಸರ್ಕಾರವು ಒಂದು ಕೋಟಿ ಮನೆಗಳ ಮೇಲ್ಛಾವಣಿಗೆ ಸೋಲಾರ್ ಅಳವಡಿಸುವ ಗುರಿಯೊಂದಿಗೆ 'ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ' ಅನ್ನು ಪ್ರಾರಂಭಿಸಲಿದೆ. ಈ ಯೋಜನೆಯು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದೂ ಅವರು ಹೇಳಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries