HEALTH TIPS

ಸಮಾಜವಾದಿ ಕರ್ಪೂರಿ ಠಾಕೂರ್‌ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ

            ವದೆಹಲಿ: ಸ್ವಾತಂತ್ರ್ಯ ಹೋರಾಟ ಮತ್ತು ಸಮಾಜವಾದಿ ಆಂದೋಲನಕ್ಕೆ ಅನನ್ಯ ಕೊಡುಗೆ ನೀಡಿದ ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ (ಮರಣೋತ್ತರ)ವನ್ನು ಘೋಷಿಸಿ ರಾಷ್ಟ್ರಪತಿ ಆದೇಶಿಸಿದ್ದಾರೆ.

              ಜನ ನಾಯಕರಾಗಿದ್ದ ಕರ್ಪೂರಿ ಠಾಕೂರ್ ಅವರು ಎರಡು ಬಾರಿ (1970ರಿಂದ 1971 ಮತ್ತು 1977ರಿಂದ 1979ರವರೆಗೆ) ಬಿಹಾರದ ಮುಖ್ಯಮಂತ್ರಿಯಾಗಿದ್ದರು.

             ಸ್ವಾತಂತ್ರ್ಯ ಪೂರ್ವದಲ್ಲಿ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಪಾಲ್ಗೊಂಡು ಸೆರೆವಾಸ ಅನುಭವಿಸಿದ್ದರು. ತಮ್ಮ ಜೀವನದುದ್ದಕ್ಕೂ ಹಿಂದುಳಿದ ವರ್ಗಗಳ ಮತ್ತು ಬಡ ಜನರ ಏಳಿಗೆಗಾಗಿ ದುಡಿದವರು ಠಾಕೂರ್‌.ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸರ್ಕಾರಿ ಉದ್ಯೋಗದಲ್ಲಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೀಸಲಾತಿ ಕಲ್ಪಿಸುವ ಮುಂಗೇರಿ ಲಾಲ್ ಸಮಿತಿ ವರದಿಯನ್ನು ಕರ್ಪೂರಿ ಠಾಕೂರ್ ಜಾರಿಗೊಳಿಸಿದ್ದರು.

              1988ರ ಫೆ. 17ರಂದು ಅವರು ನಿಧನರಾದರು. 1924ರ ಜ. 24ರಂದು ಜನಿಸಿದ ಕರ್ಪೂರಿ ಠಾಕೂರ್ ಅವರ ಜನ್ಮಶತಮಾನೋತ್ಸವದ ಒಂದು ದಿನ ಮೊದಲೇ ಈ ಪ್ರಶಸ್ತಿ ಘೋಷಣೆಯಾಗಿದೆ.

ಠಾಕೂರ್ ಅವರ ಪುತ್ರ ರಾಮನಾಥ್ ಠಾಕೂರ್ ಅವರು ಜೆಡಿಯುನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries