HEALTH TIPS

ದೆಹಲಿಯಲ್ಲಿ ದಟ್ಟ ಮಂಜು: ವಿಮಾನಗಳ ಹಾರಾಟದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ

           ವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು (ಶುಕ್ರವಾರ) ಭಾರಿ ಮಂಜು ಕವಿದ ವಾತಾವರಣದಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

           ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ (ಐಜಿಐ) ನಿಲ್ದಾಣದಲ್ಲಿ ರನ್‌ವೇ ಕಾಣಿಸದಷ್ಟು ದಟ್ಟವಾಗಿ ಮಂಜು ಆವರಿಸಿದ್ದರಿಂದ ದೆಹಲಿಯಿಂದ ಹೊರಡಬೇಕಿದ್ದ ಹಲವು ವಿಮಾನಗಳು ವಿಳಂಬವಾಗಿದ್ದು, ಕೆಲವು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ‌ವರದಿಯಾಗಿದೆ.

ದೆಹಲಿಯಲ್ಲಿ ಕನಿಷ್ಠ ತಾಪಮಾನ 5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹಲವು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಕಾಯುತ್ತಿರುವ ದೃಶ್ಯ ಕಂಡುಬಂತು.


             ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ದಟ್ಟ ಮಂಜಿನಿಂದಾಗಿ ಹಲವೆಡೆ 'ಶೂನ್ಯ ಗೋಚರತೆ' ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಮತ್ತು ಅನಗತ್ಯ ಪ್ರಯಾಣ ಮಾಡದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

               ನಾನು ದುಬೈನಿಂದ ಬಂದಿದ್ದೇನೆ. ಮಂಜಿನಿಂದಾಗಿ ನಾನು ಹೊರಡಬೇಕಿದ್ದ ವಿಮಾನ ವಿಳಂಬವಾಗಿದೆ ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries