ಕಾಸರಗೋಡು: ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ಇಂದು(ಜ 6) ಬೆಳಗ್ಗೆ 10.30ಕ್ಕೆ ಕಾಸರಗೋಡು ಕ್ಯಾಪಿಟಲ್ ಇನ್ ಸಭಾಂಗಣದಲ್ಲಿ ಜರುಗಲಿದೆ. ಸಂಘದ ಅಧ್ಯಕ್ಷ ಎ.ಆರ್ ಸುಬ್ಬಯ್ಯಕಟ್ಟೆ ಅಧ್ಯಕ್ಷತೆ ವಹಿಸುವರು. ವಾರ್ಷಿಕ ವರದಿ, ಲೆಕ್ಕಪತ್ರ ಮಂಡನೆ, ನೂತನ ಪದಾಧಿಕಾರಿಗಳ ಆಯ್ಕೆ ನಡೆಯುವುದು.
ಮಧ್ಯಾಹ್ನ 2.30ಕ್ಕೆ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಕೆ.ವಿ ಪ್ರಭಾಕರ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪಾಲ್ಗೊಳ್ಳುವರು. ಈ ಸಂದರ್ಭ ಕಾಸರಗೋಡಿನ ಕನ್ನಡ ಪತ್ರಕರ್ತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪತ್ರಕರ್ತರು ಹಾಗೂ ಕನ್ನಡಪರ ಸಂಘಟಕರಿಂದ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಮುಕ್ತ ಸಂವಾದ ನಡೆಸುವರು.


