ನವದೆಹಲಿ: ಆರು ಮಂದಿ ನ್ಯಾಯಾಧೀಶೆಯರ ಕಾರ್ಯ ತೃಪ್ತಿಕರವಾಗಿಲ್ಲ ಎಂದು ಮಧ್ಯಪ್ರದೇಶ ಸರ್ಕಾರ, ಅವರನ್ನು ಸೇವೆಯಿಂದ ವಜಾಗೊಳಿಸಿರುವುದರ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
0
samarasasudhi
ಜನವರಿ 13, 2024
ನವದೆಹಲಿ: ಆರು ಮಂದಿ ನ್ಯಾಯಾಧೀಶೆಯರ ಕಾರ್ಯ ತೃಪ್ತಿಕರವಾಗಿಲ್ಲ ಎಂದು ಮಧ್ಯಪ್ರದೇಶ ಸರ್ಕಾರ, ಅವರನ್ನು ಸೇವೆಯಿಂದ ವಜಾಗೊಳಿಸಿರುವುದರ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ಸಂಜಯ್ ಕರೋಲ್ ಅವರನ್ನು ಒಳಗೊಂಡ ನ್ಯಾಯಪೀಠವು, ಮೂವರು ಮಾಜಿ ನ್ಯಾಯಾಧೀಶೆಯರು ಸಲ್ಲಿಸಿದ ಅರ್ಜಿಯನ್ನು ಸ್ವೀಕರಿಸಿದೆ ಮತ್ತು ಅದನ್ನು ರಿಟ್ ಅರ್ಜಿಯಾಗಿ ಪರಿಗಣಿಸಲು ತೀರ್ಮಾನಿಸಿದೆ.