ನವದೆಹಲಿ: ದೇಶದ ಜನರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.
0
samarasasudhi
ಜನವರಿ 01, 2024
ನವದೆಹಲಿ: ದೇಶದ ಜನರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.
'ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಈ ವರ್ಷ (2024) ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಉತ್ತಮ ಆರೋಗ್ಯ ದೊರೆಯಲಿ' ಎಂದು ಪ್ರಧಾನಿ ನರೇಂದ್ರ ಮೋದಿ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹರ್ಷೋದ್ಗಾರ, ಪರಸ್ಪರ ಶುಭಾಶಯ ವಿನಿಮಯ, ಪಟಾಕಿಗಳ ಚಿತ್ತಾರಗಳೊಂದಿಗೆ ಜನರು ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ.
ರಸ್ತೆಗಳು, ಹೋಟೆಲ್, ಪಬ್, ಬಾರ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ನೆಚ್ಚಿನ ಹಾಡುಗಳಿಗೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದ ಯುವಕ-ಯುವತಿಯರು. ಕೇಕೆ, ಶಿಳ್ಳೆ ಹಾಕುವ ಮೂಲಕ ಮೊಳಗಿದ 'ಹ್ಯಾಪಿ ನ್ಯೂ ಇಯರ್' ಘೋಷಣೆ.