ಅರರಿಯಾ: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಜನವರಿ 22ರಂದು ಸ್ಫೋಟಿಸುವುದಾಗಿ ಪೊಲೀಸರಿಗೆ ಕರೆ ಮಾಡಿ ಬೆದರಿಸಿದ್ದ ವ್ಯಕ್ತಿಯನ್ನು ಬಿಹಾರದ ಅರರಿಯಾದಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದರು. ಇಂತೆಖಾಬ್ ಆಲಂ (21) ಬಂಧಿತ ವ್ಯಕ್ತಿ.
0
samarasasudhi
ಜನವರಿ 22, 2024
ಅರರಿಯಾ: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಜನವರಿ 22ರಂದು ಸ್ಫೋಟಿಸುವುದಾಗಿ ಪೊಲೀಸರಿಗೆ ಕರೆ ಮಾಡಿ ಬೆದರಿಸಿದ್ದ ವ್ಯಕ್ತಿಯನ್ನು ಬಿಹಾರದ ಅರರಿಯಾದಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದರು. ಇಂತೆಖಾಬ್ ಆಲಂ (21) ಬಂಧಿತ ವ್ಯಕ್ತಿ.
'ಈತನಿಗೆ ಅಪರಾಧ ಹಿನ್ನೆಲೆ ಇಲ್ಲ. ಮಾನಸಿಕ ಅಸ್ವಸ್ಥನಂತೆ ಕಾಣುತ್ತಾನೆ. ಆದರೆ ಸೂಕ್ಷ್ಮ ವಿಷಯವಾಗಿರುವ ಕಾರಣ ಪ್ರಕರಣ ದಾಖಲಿಸಿಕೊಂಡು, ಮೊಬೈಲ್ ವಶಕ್ಕೆ ಪಡೆಯಲಾಗಿದೆ' ಎಂದು ಅವರು ತಿಳಿಸಿದ್ದಾರೆ.