ಪೆರ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಂಜೇಶ್ವರ, ಪೆರ್ಲ ವಲಯದ ಪ್ರಗತಿಬಂಧು ಸ್ವ-ಸಹಾಯ ಸಂಘಗಳು, ಜ್ಞಾನವಿಕಾಸ, ಶೌರ್ಯವಿಪತ್ತು ನಿರ್ವಹಣಾ ಘಟಕ, ಹೊಂಬೆಳಕು ನವಜೀವನ ಸಮಿತಿ ಸಂಯುಕ್ತ ಆಶ್ರಯದಲ್ಲಿ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಲ್ತಿ) ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಿತು.
ಸಜಂಗದ್ದೆ ಶ್ರೀಧರ ಭಟ್ ಅವರ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಜರಗಿತು. ಬಳಿಕ ನಡೆದ ಧಾರ್ಮಿಕ ಸಭೆಯನ್ನು ಧ.ಗ್ರಾ.ಮಂಜೇಶ್ವರ ತಾಲೂಕು ಯೋಜನಾಧಿಕಾರಿ ಶಶಿಕಲಾ ಸುವರ್ಣ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.
ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಪೆರ್ಲ ವಲಯ ಅಧ್ಯಕ್ಷ ಶ್ರೀಧರ ಮಣಿಯಾಣಿ ಅಧ್ಯಕ್ಷತೆವಹಿಸಿದ್ದರು. ನಿವೃತ್ತ ಪ್ರಾಧ್ಯಾಪಕ, ಧಾರ್ಮಿಕ ಮುಖಂಡ ಅಶೋಕ್ ಬಾಡೂರು ಧಾರ್ಮಿಕ ಉಪನ್ಯಾಸಗೈದರು.
ಎಣ್ಮಕಜೆ ಗ್ರಾಪಂ ಅಧ್ಯಕ್ಷ ಸೋಮಶೇಖರ ಜೆ.ಎಸ್. ಇಡಿಯಡ್ಕ ಕ್ಷೇತ್ರ ಆಡಳಿತ ಮಂಡಳಿ ಸದಸ್ಯ, ಜನಜಾಗೃತಿ ವೇದಿಕೆ ಸದಸ್ಯ ಪ್ರಸಾದ್ ಟಿ.ಪೆರ್ಲ, ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷ ಬಿ.ಪಿ. ಶೇಣಿ, ಎಣ್ಮಕಜೆ ಗ್ರಾ.ಪಂ.ಮಾಜಿ ಉಪಾಧ್ಯಕ್ಷೆ, ಸಾಮಾಜಿಕ ಕಾರ್ಯಕರ್ತೆ ಆಯಿμÁ ಎ.ಎ. ಪೆರ್ಲ, ಮಂಜೇಶ್ವರ ತಾಲೂಕು ಶೌರ್ಯ ವಿಪತ್ತು ಘಟಕದ ಸಂಚಾಲಕ ಸುರೇಂದ್ರ ಬಿ ಮಾತನಾಡಿದರು. ಸೇವಾ ಪ್ರತಿನಿಧಿಗಳು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ಹೊಂಬೆಳಕು ನವಜೀವನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಮತಾ ನಲ್ಕ ಪ್ರಾರ್ಥನೆಗೈದರು. ಪೆರ್ಲ ವಲಯ ಮೇಲ್ವಿಚಾರಕಿ ಜಯಶ್ರೀ ಸ್ವಾಗತಿಸಿ ಧರ್ಮತ್ತಡ್ಕ ಒಕ್ಜೂಟದ ಸೇವಾ ಪ್ರತಿನಿಧಿ ಚಂದ್ರಾವತಿ ವಂದಿಸಿದರು.ಜಯ ಮಣಿಯಂಪಾರೆ ನಿರೂಪಿಸಿದರು.




.jpg)
.jpg)
.jpg)
.jpg)
