ನವದೆಹಲಿ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಡೀಪ್‌ಫೇಕ್ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸಚಿನ್ ಕಳವಳ ವ್ಯಕ್ತಪಡಿಸಿದ್ದಾರೆ.
0
samarasasudhi
ಜನವರಿ 15, 2024
ನವದೆಹಲಿ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಡೀಪ್‌ಫೇಕ್ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸಚಿನ್ ಕಳವಳ ವ್ಯಕ್ತಪಡಿಸಿದ್ದಾರೆ.
ವಿಡಿಯೊವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಸಚಿನ್ ಅವರು, 'ಈ ವಿಡಿಯೊ ನಕಲಿ. ತಂತ್ರಜ್ಞಾನದ ದುರ್ಬಳಕೆಯಾಗುತ್ತಿರುವುದನ್ನು ನೋಡಿದರೆ ಬೇಸರವಾಗುತ್ತದೆ. ಈ ರೀತಿಯ ವಿಡಿಯೊಗಳು, ಜಾಹೀರಾತುಗಳು ಮತ್ತು ಅಪ್ಲಿಕೇಶನ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರಿಪೋರ್ಟ್ ಮಾಡಲು ಎಲ್ಲರಿಗೂ ವಿನಂತಿಸಿ. ಸಾಮಾಜಿಕ ಮಾಧ್ಯಮ ವೇದಿಕೆಗಳು ಎಚ್ಚರಿಕೆ ಮತ್ತು ದೂರುಗಳಿಗೆ ಸ್ಪಂದಿಸುವ ಅಗತ್ಯವಿದೆ. ತಪ್ಪು ಮಾಹಿತಿ ಮತ್ತು ಡೀಪ್‌ಫೇಕ್‌ಗಳ ಹರಡುವಿಕೆಯನ್ನು ನಿಲ್ಲಿಸಲು ತ್ವರಿತ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ' ಎಂದು ಬರೆದುಕೊಂಡಿದ್ದಾರೆ.
ಕೆಲವು ತಿಂಗಳ ಹಿಂದೆ ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವು ಉದ್ಯಮಿಗಳು ಹಾಗೂ ಸಿನಿ ತಾರೆಯರ ಡೀಪ್‌ಫೇಕ್ ವಿಡಿಯೊ ಮಾಡಲಾಗಿತ್ತು.