ಎರ್ನಾಕುಳಂ: ಮುಖ್ಯಮಂತ್ರಿಗಳ ಪರಿಹಾರ ನಿಧಿಯಲ್ಲಿನ ಹಣವನ್ನು ಬೇರೆಡೆಗೆ ವರ್ಗಾಯಿಸಲಾಗಿದೆ ಎಂಬ ಮನವಿಯನ್ನು ತಿರಸ್ಕರಿಸಿದ ತ್ರಿಸದಸ್ಯ ಲೋಕಾಯುಕ್ತ ಪೀಠದ ಆದೇಶವನ್ನು ಪ್ರಶ್ನಿಸಿ ಅರ್ಜಿದಾರ ಆರ್.ಎಸ್. ಶಶಿಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಆದೇಶ ಕಾನೂನು ಬಾಹಿರ ಎಂದು ಶಶಿಕುಮಾರ್ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಣ ಮಂಜೂರು ಮಾಡುವ ಅಧಿಕಾರವಿದ್ದು, ಭ್ರಷ್ಟಾಚಾರ ನಡೆದಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂಬ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೀಠ ಶಶಿಕುಮಾರ್ ಅವರ ಅರ್ಜಿಯನ್ನು ತಿರಸ್ಕರಿಸಿತು. ಇದರೊಂದಿಗೆ ಮುಖ್ಯಮಂತ್ರಿ, ಇತರೆ ಸಚಿವರು, ಮುಖ್ಯ ಕಾರ್ಯದರ್ಶಿ ಹಾಗೂ ಲೋಕಾಯುಕ್ತ ರಿಜಿಸ್ಟ್ರಾರ್ ವಿರುದ್ಧ ಹೈಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.
2018ರಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಹಣವನ್ನು ನಿಯಮ ಉಲ್ಲಂಘಿಸಿ ಪರಭಾರೆ ಮಾಡಲಾಗಿದೆ ಎಂದು ಅರ್ಜಿದಾರ ಆರ್.ಎಸ್. ಶಶಿಕುಮಾರ್ ಲೋಕಾಯುಕ್ತರ ಮೊರೆ ಹೋಗಿದ್ದರು. ಆದರೆ, ಲೋಕಾಯುಕ್ತ ಪೀಠವು ಹಣ ವರ್ಗಾವಣೆ ಮಾಡಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿತು.


