ಕಾಸರಗೋಡು: ಮತದಾರರ ವಿಕಶೇಷ ಕರಡು ಪಟ್ಟಿ ಪರಿಷ್ಕರಣೆ-2024 ರ ಅಂಗವಾಗಿ ಕರಡು ಮತದಾರರ ಪಟ್ಟಿಯ ಪರಿಶೀಲನೆಯನ್ನು ವಿಲೇಜ್ ಆಫೀಸ್ ವ್ಯಾಪ್ತಿಯಲ್ಲಿ ಜನವರಿ 7 ರಂದು ಬೆಳಗ್ಗೆ 10 ಗಂಟೆಯಿಂದ ನಡೆಸಲು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಅವರು ಜಿಲ್ಲೆಯ ಎಲ್ಲಾ ವಿಲೇಜ್ ಆಫೀಸರ್‍ಗಳಿಗೆ ನಿರ್ದೇಶ ನೀಡಿದ್ದಾರೆ.
ವಿಲೇಜ್ ವ್ಯಾಪ್ತಿಯ ಎಲ್ಲಾ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಬೂತ್ ಮಟ್ಟದ ಏಜೆಂಟರುಗಳು ಪರಿಶೀಲನಾ ಕೇಂದ್ರಕ್ಕೆ ಹಾಜರಾಗಬೇಕು. ಶಿಬಿರದಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಮೃತ ಪಟ್ಟಿರುವ ಮತ್ತು ಅನರ್ಹ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲು ಕ್ರಮಕೈಗೊಳ್ಳಲಾಗುವುದು ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂಬುದನ್ನು ಪರಿಶೀಲಿಸಿ ಸೇರ್ಪಡೆಗೊಳ್ಳದವರ ಹೆಸರನ್ನು ಸೇರಿಸಲು ಈ ಕ್ಯಾಂಪಿನಲ್ಲಿ ಮಾರ್ಗದರ್ಶನ ನೀಡಲಾಗುವುದು. ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.




.jpg)
