HEALTH TIPS

ನ್ಯೂಸ್‌ಕ್ಲಿಕ್‌ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

              ವದೆಹಲಿ: ಚೀನಾ ಪರ ಪ್ರಚಾರ ಮಾಡಲು ಸುದ್ದಿ ಪೋರ್ಟಲ್‌ಗೆ ಹಣ ಪಡೆದ ಆರೋಪದ ಮೇಲೆ ಭಯೋತ್ಪಾದನೆ ನಿಗ್ರಹ ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ (ಯುಎಪಿಎ) ದಾಖಲಾಗಿರುವ ಪ್ರಕರಣದಲ್ಲಿ 'ನ್ಯೂಸ್‌ಕ್ಲಿಕ್‌' ಸುದ್ದಿ ಸಂಸ್ಥೆಯ ಸಂಸ್ಥಾಪಕ ಪ್ರಬೀರ್‌ ಪುರಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಫೆಬ್ರುವರಿ 17ರವರೆಗೆ ವಿಸ್ತರಿಸಿದೆ.

                ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಹರ್ದೀಪ್‌ ಕೌರ್‌ ಅವರು ಈ ಕುರಿತು ಸೋಮವಾರ ಆದೇಶಿಸಿದರು. ಪ್ರಬೀರ್‌ ಪುರಕಾಯಸ್ಥ ಪ್ರಕರಣದ ಆರೋಪಿಯಾಗಿದ್ದರೆ, ಚಕ್ರವರ್ತಿ ಅವರು ಸರ್ಕಾರದ ಪರ ಸಾಕ್ಷಿದಾರರಾಗಿ ಪರಿವರ್ತಿತರಾಗಿದ್ದಾರೆ.

               ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಅಕ್ಟೋಬರ್‌ 3ರಂದು ಇಬ್ಬರನ್ನೂ ಬಂಧಿಸಿದ್ದರು. ಕಳೆದ ತಿಂಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಚಕ್ರವರ್ತಿ ಅವರು, ಪ್ರಕರಣದಲ್ಲಿ ಸರ್ಕಾರದ ಪರ ಸಾಕ್ಷ್ಯ ಹೇಳುವುದಾಗಿ ಕೋರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಬಳಿ ಸಾಂದರ್ಭಿಕ ಸಾಕ್ಷ್ಯಗಳಿದ್ದು, ಇವುಗಳನ್ನು ದೆಹಲಿ ಪೊಲೀಸರ ಎದುರು ಬಹಿರಂಗಪಡಿಸಲು ಸಿದ್ಧವಿರುವುದಾಗಿ ಹೇಳಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries