HEALTH TIPS

ಕುಮಾರವ್ಯಾಸ ಭಾರತವು ಕನ್ನಡ ಸಾಹಿತ್ಯದ ಜೀವಾಳ- ವಿ.ಬಿ.ಕುಳಮರ್ವ

                    ಉಪ್ಪಳ: ಜನಸಾಮಾನ್ಯರಿಗೆ ಪ್ರವೇಶಿಸಲು ಅಸಾಧ್ಯವಾದ ಸಂಸ್ಕøತ ಭಾಷೆಯ ವ್ಯಾಸ ಮಹಾಕವಿಯ ಮಹಾಭಾರತವೆಂಬ ಗಹನ ಗಹ್ವರವಾದ ಗೊಂಡಾರಣ್ಯ ಸಮಾನವಾದ ಮಹಾಕಾವ್ಯವನ್ನು ನಗುವ ನಂದನವನವನ್ನಾಗಿಸಿ ಸುಲಭವಾಗಿ ಪ್ರವೇಶಿಸಲು ಅನುವು ಮಾಡಿಕೊಟ್ಟ ಕುಮಾರವ್ಯಾಸ ನಿಜವಾಗಿಯೂ ಮಹಾಕವಿ ರತ್ನ. ಆತ ಅಪ್ಪಟ ಭಕ್ತಕವಿ.  ಕೃಷ್ಣಪರಮಾತ್ಮನ ಮೇಲಿನ ಭಕ್ತಿಯ ಪರಾಕಾಷ್ಠೆಯನ್ನು ಒಳಗೊಂಡಿರುವ ಆತನ ಮಹಾಕಾವ್ಯವೇ ಕರ್ಣಾಟ ಭಾರತ ಕಥಾಮಂಜರಿ ಅಥವಾ ಗದುಗು ಭಾರತ. ಕನ್ನಡ ಸಾಹಿತ್ಯದಲ್ಲಿ ಭಾಮಿನಿ ಷಟ್ಪದಿಯಲ್ಲಿ ಮೂಡಿಬಂದ ಈ ಮೇರುಕೃತಿಯೇ ನಡುಗನ್ನಡ ಸಾಹಿತ್ಯದ ಜೀವಾಳ. ಕಾವ್ಯಲೋಕದ ಚಿರಂಜೀವಿಯಾದ ಗದುಗಿನ ನಾರಣಪ್ಪನ ದಿವ್ಯಕಥಾಮೃತವನ್ನು ಹಾಡಿ ಆಸ್ವಾದಿಸುವುದೇ ನಾವು ಆ ಮಹಾಕವಿಗೆ ಸಲ್ಲಿಸುವ ಮಹಾನಮನ" ಎಂದು ಹಿರಿಯ ಸಾಹಿತಿ ಶಿಕ್ಷಣತಜ್ಞ ವಿ.ಬಿ.ಕುಳಮರ್ವ ಅವರು ಅಭಿಪ್ರಾಯಪಟ್ಟರು.

            ಮಂಗಲ್ಪಾಡಿಯ ಏಕಾಹ ಭಜನಾ ಮಂದಿರದಲ್ಲಿ ಕರ್ನಾಟಕ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕ ಮತ್ತು ಕಲಾಕುಂಚ ಕೇರಳ ಗಡಿನಾಡ ಘಟಕದ ಸಂಯುಕ್ತ ಆಶ್ರಯದಲ್ಲಿ  ವ್ಯವಸ್ಥೆಗೊಳಿಸಿದ "ಮಹಾಕವಿ ನಮನ" ಸಮಾರಂಭದಲ್ಲಿ ಅವರು ಕವಿಪುಂಗವನಿಗೆ ನುಡಿಕುಸುಮಗಳನ್ನರ್ಪಿಸಿ ನಮಿಸಿ ಮಾತನಾಡಿದರು.

               "ಕುಮಾರವ್ಯಾಸನೆಂದರೆ ಜನಸಾಮಾನ್ಯರಿಗೂ ಮಹಾಕಾವ್ಯವನ್ನು ಸರಳ ಸುಂದರವಾಗಿ ಮನದಟ್ಟು ಮಾಡಿಕೊಡುವ ಮಹಾಕವಿ" ಎಂದು ಕರ್ನಾಟಕ ಕಾಲೇಜು ಇಲಾಖೆಯ ನಿವೃತ್ತ ನಿರ್ದೇಶಕ ಗಿರಿಧರ ಮಾಣಿಹಿತ್ತಿಲು ಅವರು ಸಮಾರಂಭವನ್ನು ದೀಪಬೆಳಗಿಸಿ ಉದ್ಘಾಟಿಸಿ ನುಡಿದರು. ಕಲಾಕುಂಚ ಸಂಸ್ಥೆಯ ಅಧ್ಯಕ್ಷ  ಜಯಲಕ್ಷ್ಮಿ ಕಾರಂತ ಸ್ವಾಗತಿಸಿ, ಗಮಕ ಕಲೆಯ ಮಹತ್ವದ ಬಗ್ಗೆ ಬೆಳಕು ಚೆಲ್ಲಿದರು. ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದರು.

                ಕುಮಾರವ್ಯಾಸ ಮಹಾಕವಿಯ ಕೃತಿಯಿಂದಾಯ್ದ ಕೀಚಕೋಪಾಖ್ಯಾನದ ಭಾಗವನ್ನು ಗಮಕಿ ದಿವ್ಯಾ ಕಾರಂತ ಮಂಗಲ್ಪಾಡಿ ಅವರು ಸುಶ್ರಾವ್ಯವಾಗಿ ವಾಚನ ಮಾಡಿದರು.  ಹಿರಿಯ ಗಮಕಿ ಕಲಾಶ್ರೀ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್ ಮನೋಜ್ಞವಾಗಿ ವ್ಯಾಖ್ಯಾನಗೈದರು. ಕನ್ನಡ ಸಾಹಿತ್ಯ ಪರಿಷತ್ತಿನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅವರು ಕಲಾವಿದರಿಗೆ ಶಾಲು ಹೊದೆಸಿ ಶುಭಹಾರೈಸಿದರು. ವೇದಾಂತ್ ಮತ್ತು ದೇವಾಂಶು ಪ್ರಾರ್ಥನೆಗೈದರು. ಜಯಲಕ್ಷ್ಮಿ ಆರ್.ಹೊಳ್ಳ ಕಾರ್ಯಕ್ರಮ ನಿರೂಪಿಸಿದರು. ಭಜನಾ ಮಂದಿರದ ಅಧ್ಯಕ್ಷ ಸುರೇಶ್ ಶೆಟ್ಟಿ ಪರಂಕಿಲ ವಂದಿಸಿದರು. 



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries