ಮುಂಬೈ: ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ)ವು 2023ರಲ್ಲಿ 1,622 ಜನರಿಗೆ ಪೈಲಟ್ ಪರವಾನಗಿ ನೀಡಿದ್ದು, ಇದು ದಶಕದಲ್ಲೇ ಅತ್ಯಧಿಕ ಸಂಖ್ಯೆಯಾಗಿದೆ. ಜತೆಗೆ ಮಹಿಳಾ ಪೈಲಟ್‌ಗಳ ಸಂಖ್ಯೆಯೂ ಗಣನೀಯವಾಗಿ ಹೆಚ್ಚಿದೆ.
0
samarasasudhi
ಜನವರಿ 02, 2024
ಮುಂಬೈ: ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ)ವು 2023ರಲ್ಲಿ 1,622 ಜನರಿಗೆ ಪೈಲಟ್ ಪರವಾನಗಿ ನೀಡಿದ್ದು, ಇದು ದಶಕದಲ್ಲೇ ಅತ್ಯಧಿಕ ಸಂಖ್ಯೆಯಾಗಿದೆ. ಜತೆಗೆ ಮಹಿಳಾ ಪೈಲಟ್‌ಗಳ ಸಂಖ್ಯೆಯೂ ಗಣನೀಯವಾಗಿ ಹೆಚ್ಚಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ ಡಿಜಿಸಿಎ, '2022ರಲ್ಲಿ 1,165 ಪರವಾನಗಿಯನ್ನು ಡಿಜಿಸಿಎ ವಿತರಿಸಿತ್ತು.
'ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಮಹಿಳಾ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಕೈಗೊಂಡ ಯೋಜನೆಯೇ ಈ ಸಂಖ್ಯೆ ಏರಿಕೆಗೆ ಕಾರಣ. ಸದ್ಯ ವಿಮಾನ ಯಾನ ಕ್ಷೇತ್ರದಲ್ಲಿ ಮಹಿಳಾ ಪೈಲಟ್‌ಗಳ ಒಟ್ಟು ಸಂಖ್ಯೆ ಶೇ 14ರಷ್ಟಿದೆ' ಎಂದು ಹೇಳಿದೆ.
'ಕೊರೊನಾ ಸೋಂಕಿನ ತೀವ್ರತೆ ಕಡಿಮೆಯಾದ ನಂತರ ವಾಯುಯಾನ ಕ್ಷೇತ್ರವು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಏರ್ ಇಂಡಿಯಾ ಹಾಗೂ ಇಂಡಿಗೊ ಕಂಪನಿಗಳು ಹೆಚ್ಚಿನ ವಿಮಾನಗಳ ಖರೀದಿಗೆ ಮುಂದಾಗಿವೆ. ಇದರೊಂದಿಗೆ ಚಿಕ್ಕ ವಿಮಾನಯಾನ ಕಂಪನಿಗಳೂ ಹೊಸ ಚಾರ್ಟರ್ ವಿಮಾನ ಮತ್ತು ಹೆಲಿಕಾಪ್ಟರ್‌ಗಳ ಖರೀದಿ ನಡೆಸುತ್ತಿವೆ. ನಿರ್ದೇಶನಾಲಯವು ಇವುಗಳಿಗೆ ಅನುಮತಿ ನೀಡಿದೆ. ಹೆಲಿಕಾಪ್ಟರ್ ಹಾರಾಟ ತರಬೇತಿಗೆ ಹೊಸ ಕೇಂದ್ರಗಳಿಗೂ ಅನುಮತಿ ನೀಡಲಾಗುತ್ತಿದೆ' ಎಂದು ಹೇಳಿದೆ.
ಇದರೊಂದಿಗೆ ಹೆಲಿಕಾಪ್ಟರ್‌ಗಳ ಬಳಕೆ ತೀರ್ಥಕ್ಷೇತ್ರಗಳ ಯಾತ್ರೆ, ಏರ್ ಆಂಬುಲೆನ್ಸ್ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ವ್ಯಾಪಕವಾಗಿ ಹೆಚ್ಚಾಗಲಿದೆ. ಸೇನೆಯ ಮಾಜಿ ಪೈಲೆಟ್‌ಗಳನ್ನು ಹೊರತುಪಡಿಸಿ ಹೆಚ್ಚುವರಿ ಪೈಲೆಟ್‌ಗಳ ನೇಮಕ ಈ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಿದಂತಾಗಿದೆ' ಎಂದು ಡಿಜಿಸಿಎ ಹೇಳಿದೆ.