ಕಾಸರಗೋಡು: ಭಾರತ್ ಪರ್ಯಾಯ ಯೋಜನೆಯನ್ವಯ ರಾಜ್ಯದಲ್ಲಿ ನಿರ್ಮಾಣಕಾಮಗಾರಿ ಆರಂಭಗೊಳ್ಳುವ ಹಾಗೂ ಕಾಮಗಾರಿ ಪೂರ್ಣಗೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಜ. 5ರಂದು ಮಧ್ಯಾಹ್ನ 3.30ಕ್ಕೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸುವರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾಸರಗೋಡು ತಾಳಿಪಡ್ಪು ಮೈದಾನದಲ್ಲಿ ಸಮಾರಂಭ ಆಯೋಜಿಸಲಾಗಿದ್ದು, ಇದೇ ವಏದಿಕೆಯಿಂದ ಮುನ್ನಾರ್‍ನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸುವರು. ಕೇಂದ್ರ ಸಚಿವರಾದ ಡಾ.ವಿ.ಕೆ.ಸಿಂಗ್, ವಿ.ಮುರಳೀಧರನ್, ಕೇರಳ ರಾಜ್ಯ ಲೋಕೋಪಯೋಗಿ-ಪ್ರವಾಸೋದ್ಯಮ ಖಾತೆ ಸಚಿವ ಪಿ.ಎ.ಮಹಮ್ಮದ್ ರಿಯಾಜ್, ಸಂಸದರು, ಶಾಸಕರು ಭಾಗವಹಿಸುವರು.





