ಮುಂಬೈ: ಇಲ್ಲಿನ ಸ್ಥಳೀಯ ಕ್ರಿಕೆಟ್ ಪಂದ್ಯವೊಂದರಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ 52 ವರ್ಷದ ವ್ಯಕ್ತಿಯೊಬ್ಬರ ತಲೆಗೆ ಚೆಂಡು ಬಡಿದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
0
samarasasudhi
ಜನವರಿ 10, 2024
ಮುಂಬೈ: ಇಲ್ಲಿನ ಸ್ಥಳೀಯ ಕ್ರಿಕೆಟ್ ಪಂದ್ಯವೊಂದರಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ 52 ವರ್ಷದ ವ್ಯಕ್ತಿಯೊಬ್ಬರ ತಲೆಗೆ ಚೆಂಡು ಬಡಿದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಟುಂಗಾ ಪ್ರದೇಶದ ದಾಡ್ಕರ್ ಕ್ರಿಕೆಟ್ ಮೈದಾನದಲ್ಲಿ ಏಕಕಾಲಕ್ಕೆ ಎರಡು ಪಂದ್ಯಗಳು ನಡೆಯುತ್ತಿದ್ದವು.
ತಲೆಗೆ ಪೆಟ್ಟಾಗಿ ಪ್ರಜ್ಞಾಹೀನರಾಗಿ ಬಿದ್ದಿದ್ದ ಸಾವ್ಲಾ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಘಟನೆ ಸಂಬಂಧ ಮಾಟುಂಗಾ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.