ನವದೆಹಲಿ: 2018ರಿಂದ ಈವರೆಗೆ ನೈಸರ್ಗಿಕ ಅವಘಡ, ಅಪಘಾತ ಮತ್ತು ವೈದ್ಯಕೀಯ ಕಾರಣ ಸೇರಿದಂತೆ ವಿವಿಧ ಕಾರಣಗಳಿಂದ ವಿದೇಶಗಳಲ್ಲಿ 403 ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ.
0
samarasasudhi
ಫೆಬ್ರವರಿ 03, 2024
ನವದೆಹಲಿ: 2018ರಿಂದ ಈವರೆಗೆ ನೈಸರ್ಗಿಕ ಅವಘಡ, ಅಪಘಾತ ಮತ್ತು ವೈದ್ಯಕೀಯ ಕಾರಣ ಸೇರಿದಂತೆ ವಿವಿಧ ಕಾರಣಗಳಿಂದ ವಿದೇಶಗಳಲ್ಲಿ 403 ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ.
ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಕೆನಡಾದಲ್ಲಿಯೇ ಅತಿ ಹೆಚ್ಚು ಅಂದರೆ 91 ಸಾವುಗಳು ವರದಿಯಾಗಿವೆ. 48 ಸಾವುಗಳೊಂದಿಗೆ ಯುಕೆ ನಂತರದ ಸ್ಥಾನದಲ್ಲಿದೆ.
ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಕುರಿತ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಸಚಿವ ಎಸ್. ಜೈಶಂಕರ್ ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಕಲ್ಯಾಣ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.
ವಿದೇಶದಲ್ಲಿರುವ ಭಾರತೀಯ ಮಿಷನ್‌ಗಳು ಭಾರತೀಯ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಆದ್ಯತೆಯ ಆಧಾರದ ಮೇಲೆ ಪ್ರತಿಕ್ರಿಯಿಸುತ್ತವೆ ಎಂದೂ ಅವರು ತಿಳಿಸಿದ್ದಾರೆ.