HEALTH TIPS

ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10 ಲಕ್ಷ ದೇಣಿಗೆ ಡಿಡಿ ಹಸ್ತಾಂತರ

                  ಬದಿಯಡ್ಕ: ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಪೆರಡಾಲದ ಜೀರ್ಣೋದ್ಧಾರ ಕಾರ್ಯಗಳು ತ್ವರಿತ ಗತಿಯಲ್ಲಿ ಸಾಗುತ್ತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಕೊಡ ಮಾಡಿದ 10 ಲಕ್ಷದ ದೇಣಿಗೆ ಮೊತ್ತವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕÀ ಪ್ರವೀಣ್ ಕುಮಾರ್ ಹಸ್ತಾಂತರಿಸಿದರು.

                   ಅವರು ಈ ಸಂದರ್ಭ ಮಾತನಾಡಿ ಶ್ರೀ ಉದನೇಶ್ವರ ದೇವಸ್ಥಾನ ಮತ್ತು ಧರ್ಮಸ್ಥಳ ಕ್ಷೇತ್ರ ನಡುವಿನ ಅವಿನಾಭಾವ ಸಂಬಂಧವನ್ನು ಸ್ಮರಿಸಿದರು. ಈ ಹಿಂದೆ ನಡೆದ ಎರಡು ಮದ್ಯವರ್ಜನ ಶಿಬಿರ, ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟ, ಪೆರಡಾಲದ ಧರ್ಮಸ್ಥಳ ಸ್ವಸಹಾಯ ಸಂಘಗಳು, ಸೌಪರ್ಣಿಕಾ ಸಮಿತಿ ಕೆಲಸ ಕಾರ್ಯಗಳನ್ನು ಅಭಿನಂದಿಸಿದರು.

                ಪೆರಡಾಲ ಶ್ರೀಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷ ಜಯದೇವ ಖಂಡಿಗೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಮುಕೇಶ್, ಬದಿಯಡ್ಕ ವಲಯ ಮೇಲ್ವಿಚಾರಕ ದಿನೇಶ್ ಕೊಕ್ಕಡ, ಬದಿಯಡ್ಕ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಅಖಿಲೇಶ್ ನಗುಮಗಂ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಸೂರ್ಯನಾರಾಯಣ ಬಿ, ಉಪಾಧ್ಯಕ್ಷ ಪಿ.ಜಿ.ಚಂದ್ರಹಾಸ ರೈ, ಸಮಿತಿ ಲೆಕ್ಕ ಪರಿಶೋಧಕ ಕುಂಞಣ್ಣ ಬದಿಯಡ್ಕ,  ಕಾರ್ಮಾರು ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ  ಮಹೇಶ ವಳಕ್ಕುಂಜ, ಜೀರ್ಣೋದ್ಧಾರ ಯುವ ಸಮಿತಿ ಪ್ರದಾನ ಕಾರ್ಯದರ್ಶಿ ಭಾಸ್ಕರ ಪಂಜಿತ್ತಡ್ಕ, ಸೌಪರ್ಣಿಕಾ ನವಜೀವನ ಸಮಿತಿ ಅಧ್ಯಕ್ಷ ಜಯರಾಮ ಪಾಟಾಳಿ ಪಡುಮಲೆ, ಮಾತೃ ಸಮಿತಿ ಉಪಾಧ್ಯಕ್ಷೆ ವಿನಯ ಜೆ ರೈ, ಕಾರ್ಯದರ್ಶಿ ಗೀತಾ ಎಂ. ಭಟ್, ಅರ್ಚಕ ವೃಂದ, ಸಿಬ್ಬಂದಿ ವರ್ಗಮತ್ತು ಶಿವ ಶಕ್ತಿ ಕ್ಲಬ್ಬಿನ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು. ಸೇವಾ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ನಿರಂಜನ ರೈ ಪೆರಡಾಲ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮೊಕ್ತೇಸರ ಪಿ.ಜಿ. ಜಗನ್ನಾಥ ರೈ ವಂದಿಸಿದರು. ವೇದಮೂರ್ತಿ ವೆಂಕಟೇಶ್ವರ ಭಟ್ ಪಟ್ಟಾಜೆ ಪ್ರಾರ್ಥನೆ ಹಾಡಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries