ನವದೆಹಲಿ: ಆರ್‌ಎಸ್‌ಎಸ್‌ನ ಅಖಿಲ ಭಾರತ 'ಪ್ರತಿನಿಧಿ' ಸಭೆಯು ಮುಂದಿನವಾರ ನಾಗಪುರದಲ್ಲಿ ನಡೆಯಲಿದ್ದು, ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
0
samarasasudhi
ಮಾರ್ಚ್ 08, 2024
ನವದೆಹಲಿ: ಆರ್‌ಎಸ್‌ಎಸ್‌ನ ಅಖಿಲ ಭಾರತ 'ಪ್ರತಿನಿಧಿ' ಸಭೆಯು ಮುಂದಿನವಾರ ನಾಗಪುರದಲ್ಲಿ ನಡೆಯಲಿದ್ದು, ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಮೂರು ದಿನಗಳ ಈ ಸಭೆಯು ಮಾರ್ಚ್ 15ರಂದು ಆರಂಭವಾಗಲಿದೆ. ಸದ್ಯ ಕರ್ನಾಟಕದ ದತ್ತಾತ್ರೇಯ ಹೊಸಬಾಳೆ ಅವರು ಆರ್‌ಎಸ್‌ಎಸ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿ ಸ್ಥಾನದ ಜೊತೆಗೆ, ಸಂಘಟನೆಯ ವಿವಿಧ ರಾಜ್ಯ ಘಟಕಗಳ ಮುಖ್ಯಸ್ಥರು ಮತ್ತು ಕಾರ್ಯದರ್ಶಿ ಸ್ಥಾನಗಳಿಗೂ ಇದೇ ವೇಳೆ ಚುನಾವಣೆ ನಡೆಯಲಿದೆ ಎನ್ನಲಾಗಿದೆ.
ಮುಂಬರುವ ಲೋಕಸಭೆ ಚುನಾವಣೆ, ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಹಾಗೂ ಮಣಿಪುರ ಹಿಂಸಾಚಾರ ಸೇರಿದಂತೆ ಹಲವು ಪ್ರಮುಖ ವಿಚಾರಗಳು ಚರ್ಚೆಯಾಗುವ ಸಾಧ್ಯತೆ ಇದೆ ಎಂದೂ ಹೇಳಲಾಗಿದೆ.
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ದತ್ತಾತ್ರೇಯ ಹೊಸಬಾಳೆ ಹಾಗೂ ಸಂಘಟನೆಯ ಎಲ್ಲ ಜಂಟಿ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.