ಕಾಸರಗೋಡು: ಸಾಮಾಜಿಕ, ಸಾಂಸ್ಕøತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು ವತಿಯಿಂದ ಅಂತಾರಾಷ್ಟ್ರೀಯ ಖ್ಯಾತಿಯ ಗಾಯಕ ಬಾಲಚಂದ್ರಪ್ರಭು ಮತ್ತು ಬಳಗದವರಿಂದ 'ಕಾಯೋ ಕರುಣಾಕರಾ'ಸಂತವಾಣಿ ಕಾರ್ಯಕ್ರಮ ಮಾ 17ರಂದು ಸಂಜೆ 4.45ಕ್ಕೆ ಕಾಸರಗೋಡು ಕರಂದಕ್ಕಾಡಿನ ಪದ್ಮಗಿರಿ ಕಲಾಕುಟೀರದಲ್ಲಿ ಜರುಗಲಿದೆ.
ರಂಗಚಿನ್ನಾರಿಯ ಸಂಗೀತ ಘಟಕ ಸ್ವರಚಿನ್ನಾರಿ, ಮಹಿಳಾ ಘಟಕ ನಾರಿ ಚಿನ್ನಾರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಸಹಯೋಗದೊಂದಿಗೆ ಕಾರ್ಯಕ್ರಮ ಜರುಗಲಿದೆ. ಖ್ಯಾತ ವೈದ್ಯ ಡಾ. ಕೆ.ಕೆ ಶ್ಯಾನುಭಾಗ್ ಸಮಾರಂಭ ಉದ್ಘಾಟಿಸುವರು. ಖ್ಯಾತ ನೇತ್ರ ತಜ್ಞ ಡಾ. ಅನಂತ ಕಾಮತ್ ಅದ್ಯಕ್ಷತೆ ವಹಿಸುವರು. ಕಾಸರಗೋಡು ವರದರಾಜ ವೆಂಕಟ್ರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಜಗದೀಶ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ತಬಲಾದಲ್ಲಿ ರಾಜೇಶ್ ಭಾಗವತ್, ಹಾರ್ಮೋನಿಯಂನಲ್ಲಿ ಹೇಮಂತ್ ಭಾಗವತ್ ಸಹಕರಿಸುವರು.


