HEALTH TIPS

ಹೆಚ್ಚುತ್ತಿರುವ ಸೂರ್ಯತಾಪ-ಕಾಸರಗೋಡು ಸೇರಿದಂತೆ ಕೇರಳದಲ್ಲಿ ಯೆಲ್ಲೋ ಅಲರ್ಟ್

        ಕಾಸರಗೋಡು: ಕೇರಳಾದ್ಯಂತ ಗರಿಷ್ಟ ಉಷ್ಣಾಂಶ ಗಣನೀಯವಾಗಿ ಏರಿಕೆಯಾಘಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.  ಕೇಂದ್ರ ಹವಾಮಾನ ಇಲಾಖೆಯ ಪ್ರಕಾರ,  ತ್ರಿಶೂರ್ ಜಿಲ್ಲೆಯಲ್ಲಿ ಮಾರ್ಚ್ 26 ರಿಂದ 30ರ ವರೆಗೂ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್, ಕೊಲ್ಲಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್, ಪತ್ತನಂತಿಟ್ಟ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್, ಕೊಟ್ಟಾಯಂ, ಎರ್ನಾಕುಲಂ,ಕಣ್ಣೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಮತ್ತು ಆಲಪ್ಪುಳ, ಮಲಪ್ಪುರಂ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ 36 ಡಿಗ್ರಿ ಸೆಲ್ಸಿಯಸ್ (ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್)ವರೆಗೂ ಹೆಚ್ಚಾಗುವ ಸಾಧ್ಯತೆಯಿರುವುದಾಘಿ ತಿಳಿಸಿದೆ. ಹೆಚ್ಚಿನ ತಾಪಮಾನ ಮತ್ತು ಬಿಸಿ ಗಾಳಿಯಿಂದಾಗಿ, ಗುಡ್ಡಗಾಡು ಪ್ರದೇಶಗಳನ್ನು ಹೊರತುಪಡಿಸಿ ಕಾಸರಗೋಡು ಜಿಲ್ಲೆಯಲ್ಲಿ ಮಾ. 26 ರಿಂದ 30ರ ವರೆಗೆ ಅತಿಯಾದ ಉಷ್ಣಾಂಶ ಮತ್ತು ಬಿಸಿ ಗಾಳಿಯ ಅನುಭವವುಂಟಾಗಲಿರುವುದಾಗಿ ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries