ಲಖನೌ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲಾಗಿದ್ದ ಉಪೇಂದ್ರ ಸಿಂಗ್ ರಾವತ್, ಸ್ಪರ್ಧಿಸಲು ನಿರಾಕರಿಸಿದ್ದಾರೆ. ಬಿಜೆಪಿ ಟಿಕೆಟ್ ಘೋಷಣೆ ಬಳಿಕ ಸ್ಪರ್ಧಿಸಲು ನಿರಾಕರಿಸುತ್ತಿರುವ ಎರಡನೇ ಅಭ್ಯರ್ಥಿ ಇವರು.
0
samarasasudhi
ಮಾರ್ಚ್ 05, 2024
ಲಖನೌ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲಾಗಿದ್ದ ಉಪೇಂದ್ರ ಸಿಂಗ್ ರಾವತ್, ಸ್ಪರ್ಧಿಸಲು ನಿರಾಕರಿಸಿದ್ದಾರೆ. ಬಿಜೆಪಿ ಟಿಕೆಟ್ ಘೋಷಣೆ ಬಳಿಕ ಸ್ಪರ್ಧಿಸಲು ನಿರಾಕರಿಸುತ್ತಿರುವ ಎರಡನೇ ಅಭ್ಯರ್ಥಿ ಇವರು.
ಈಗಾಗಲೇ ಭೋಜಪುರಿ ಗಾಯಕ ಪವನ್ ಸಿಂಗ್ ಅವರು ಸ್ಪರ್ಧಿಸಲು ನಿರಾಕರಿಸಿದ್ದಾರೆ.
'ವಿಡಿಯೊ ನಕಲಿಯಾಗಿದ್ದು, ಎ.ಐ ತಂತ್ರಜ್ಞಾನ ಬಳಸಿ ತಿರುಚಲಾಗಿದೆ' ಎಂದು ಆರೋಪಿಸಿರುವ ಅವರು, ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಪೊಲೀಸರಿಗೆ ಒತ್ತಾಯಿಸಿದ್ದಾರೆ. ಈ ಸಂಬಂಧ ರಾವತ್ ಅವರ ಕಡೆಯವರು ಪೊಲೀಸರಿಗೂ ದೂರು ನೀಡಿದ್ದಾರೆ.
'ನನ್ನದು ಎನ್ನಲಾದ ತಿರುಚಿದ ವಿಡಿಯೊ ಜಾಲತಾಣದಲ್ಲಿ ಹರಿದಾಡುತ್ತಿದೆ. ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ಇದನ್ನು ಸೃಷ್ಟಿಸಲಾಗಿದೆ. ಈ ಬಗ್ಗೆ ದೂರು ನೀಡಿದ್ದೇನೆ. ತನಿಖೆಯಾಗಬೇಕು ಎಂದು ಪಕ್ಷದ ಅಧ್ಯಕ್ಷರಿಗೂ ಕೋರಿದ್ದೇನೆ. ನನ್ನದು ತಪ್ಪಿಲ್ಲ ಎಂದು ದೃಢಪಡುವವರೆಗೂ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ' ಎಂದು ರಾವತ್ ಅವರು ಎಕ್ಸ್ ಜಾಲತಾಣದಲ್ಲಿ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ರಾವತ್ ಅವರದ್ದು ಎನ್ನಲಾದ ಎರಡು ವಿಡಿಯೊಗಳು ಭಾನುವಾರ ಜಾಲತಾಣದಲ್ಲಿ ಸಾಕಷ್ಟು ಹಂಚಿಕೆಯಾಗಿದ್ದವು. ಎರಡೂ ವಿಡಿಯೊಗಳು ಎರಡು ವರ್ಷ ಹಳೆಯದ್ದು ಎನ್ನಲಾಗಿದೆ. ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.