ತಿರುವನಂತಪುರಂ: ಇಂದಿನಿಂದ ಈ ತಿಂಗಳ 26ರವರೆಗೆ ಕೊಟ್ಟಾಯಂ, ಕೊಲ್ಲಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್‍ಗೆ ತಲುಪುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
ಪತ್ತನಂತಿಟ್ಟ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಮತ್ತು ಅಲಪ್ಪುಳ, ಎರ್ನಾಕುಳಂ, ಮಲಪ್ಪುರಂ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ 37 ಡಿಗ್ರಿ ತಲುಪಲಿದೆ.
ತಿರುವನಂತಪುರ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿಗೆ ಏರುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೆಚ್ಚಿನ ತಾಪಮಾನ ಮತ್ತು ತೇವಾಂಶದ ಗಾಳಿಯಿಂದಾಗಿ, ಈ ಜಿಲ್ಲೆಗಳು (ಗುಡ್ಡಗಾಡು ಪ್ರದೇಶಗಳನ್ನು ಹೊರತುಪಡಿಸಿ) ಇಂದಿನಿಂದ 26 ರವರೆಗೆ ಬಿಸಿ ಮತ್ತು ಆದ್ರ್ರ ವಾತಾವರಣವನ್ನು ಅನುಭವಿಸುವ ಸಾಧ್ಯತೆಯಿದೆ.
ಏತನ್ಮಧ್ಯೆ, ಶಾಖದಿಂದ ಮುಕ್ತಿ ಎಂಬಂತೆ ಎಂಟು ಜಿಲ್ಲೆಗಳಲ್ಲಿ ನಾಳೆ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಿರುವನಂತಪುರಂ, ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ನಾಳೆ ಲಘು ಮಳೆಯಾಗುವ ಸಾಧ್ಯತೆ ಇದೆ.
ಅಲ್ಲಲ್ಲಿ ಮಳೆ:
ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ, ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಮಳೆಯಾಗಿದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಹನಿ ಹನಿಯಾಗಿ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಬೆಳಿಗ್ಗೆ ಗುಡುಗು ಮಿಂಚಿನಿಂದೊಡಗೂಡಿ ಸಣ್ಣ ಪ್ರಮಾಣದ ಮಳೆಯಾಗಿದೆ. ಉಳ್ಳಾಲ ತಾಲ್ಲೂಕು ವ್ಯಾಪ್ತಿಯ ತಲಪಾಡಿ, ಕೋಟೆಕಾರು, ಬೀರಿ, ದೇರಳಕಟ್ಟೆ, ಕುತ್ತಾರು, ತೊಕ್ಕೊಟ್ಟು ಪ್ರದೇಶದಲ್ಲಿ ಬೆಳಿಗ್ಗೆ ಮಳೆಯಾಗಿದೆ. ಕೆಲವೆಡೆ ನೀರು ಹರಿದು ಹೋಗಿದೆ. ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಪ್ರದೇಶದಲ್ಲಿ ಜೋರು ಮಳೆ ಸುರಿದಿದೆ.
ಕಾಸರಗೋಡು ಉಪ್ಪಳ, ಮಂಜೇಶ್ವರ ಪ್ರದೇಶದಲ್ಲಿ ಮಳೆಯಾಗಿದೆ. ಬದಿಯಡ್ಕ, ಕುಂಬಳೆ, ಮುಳ್ಳೇರಿಯದಲ್ಲಿ ಹನಿ ಮಳೆಯಾಗಿದೆ.

.webp)
