ಕಾಸರಗೋಡು: ಕುತ್ತಿಕ್ಕೋಲ್ ಗ್ರಾಮ ಪಂಚಾಯಿತಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ದೂರಿನ ಮೇರೆಗೆ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ(ಎಡಿಎಂ)ಕೆ. ವಿ ಶ್ರುತಿ ಅವರು ನೋಟಿಸ್ Pಜಾರಿಗೊಳಿಸಿದ್ದಾರೆ. ಜಿಲ್ಲಾ ಚುನಾವಣಾಧಿಕಾರಿಗಳ ನಿಯಂತ್ರಣ ಕೊಠಡಿಯಲ್ಲಿ ದೂರು ಸ್ವೀಕರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಕುತ್ತಿಕೋಲ್ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಪಂಚಾಯತ್ ಕಚೇರಿಯಲ್ಲಿ ಶನಿವಾರ ನಡೆದ ಕುಡಿಯುವ ನೀರಿನ ಟ್ಯಾಂಕ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಬಗ್ಗೆ ನಿಯಂತ್ರಣ ಕೊಠಡಿಗೆ ದೂರು ಬಂದಿದೆ.
ಎಡಿಎಂ ಮತ್ತು ಎಂಸಿಸಿ ನೋಡಲ್ ಅಧಿಕಾರಿ ಕೆ.ವಿ.ಶ್ರುತಿ ಅವರು ಕುತ್ತಿಕ್ಕೋಲ್ ಗ್ರಾಂ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಮತ್ತು ಪಂಚಾಯಿತಿ ಉಪಾಧ್ಯಕ್ಷೆ ಶೋಭನಾ ಕುಮಾರಿ. 6ನೇ ವಾರ್ಡ್ ಸದಸ್ಯ ಅರವಿಂದಾಕ್ಷನ್ ಅವರಿಗೆ ನೋಟಿಸ್ ಕಳುಹಿಸಲಾಗಿದ್ದು, 24 ತಾಸುಗಳೊಳಗೆ ವಿವರಣೆ ನೀಡುವಂತೆ ಸೂಚನೆ ನೀಡಲಾಗಿದೆ.

