ಕಾಸರಗೋಡು: ಕರ್ನಾಟಕ ಸರ್ಕಾರದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ನಿಯುಕ್ತರಾಗಿರುವ ಕಾಸರಗೋಡಿನ ಕನ್ನಡ ಸಂಘಟಕ, ಪ್ರಕಾಶಕ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ)ಕಾಸರಗೋಡು ಜಿಲ್ಲಾಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ ಅವರಿಗೆ ಕಾಸರಗೋಡಿನ ಕನ್ನಡಿಗರ ಪರವಾಗಿ ವಿಶೇಷ ಗೌರವಾಭಿನಂದನೆ ಇಂದು(ಮಾ 18ರಂದು) ಸಂಜೆ 5ಕ್ಕೆ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನದಲ್ಲಿ ಜರಗಲಿರುವುದು.
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಜಂಟಿ ಆಶ್ರಯದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾಸರಗೋಡಿನ ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳೂ, ಕನ್ನಡಭಿಮಾನಿಗಳೂ ಕಾರ್ಯಕ್ರಮ ದಲ್ಲಿ ಭಾಗವಹಿಸುವಂತೆ ಕನ್ನಡ ಭವನ ಮತ್ತು ಗ್ರಂಥಾಲಯದ ರೂವಾರಿ ಕೆ. ವಾಮನ್ ರಾವ್ ಬೇಕಲ್ ಹಾಗೂ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರವಿ ನಾಯ್ಕಾಪು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.


