ಬದಿಯಡ್ಕ: ಇಲ್ಲಿನ ಕ್ರಿಯೇಟಿವ್ ಕಾಲೇಜಿನ ವಾರ್ಷಿಕೋತ್ಸವ `ಅಂತರಂಗ' ವೈವಿಧ್ಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಬದಿಯಡ್ಕ ಪಂಚಾಯತಿ ಅಧ್ಯಕ್ಷೆ ಶಾಂತಾ ಬಿ. ಅಂತರಂಗ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಮುಳ್ಳೇರಿಯ ಜಿವಿಎಚ್‍ಎಸ್‍ಎಸ್ ಉಪನ್ಯಾಸಕ ಚಂದ್ರಶೇಖರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕ್ರಿಯೇಟಿವ್ ಕಾಲೇಜು ಶೈಕ್ಷಣಿಕ ವಾರ್ಷಿಕ ವರದಿಯನ್ನು ಪ್ರಾಂಶುಪಾಲ ಪ್ರಕಾಶ್ ಎಂಎಸ್. ಮಂಡಿಸಿದರು. ರಕ್ಷಕ ಶಿಕ್ಷಕ ಸಂಘದ ಕಾರ್ಯದರ್ಶಿ ಸುಜಾತಾ ಉಪಸ್ಥಿತರಿದ್ದರು. ಶೀಜಾ ಕೆ. ಸ್ವಾಗತಿಸಿ, ಅನುಪಮಾ ವಂದಿಸಿದರು. ನಂತರ ವಿದ್ಯಾರ್ಥಿಗಳು ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮವನ್ನು ಪ್ರದರ್ಶಿಸಿದರು.




.jpg)
