HEALTH TIPS

ಕೊಯಮತ್ತೂರು: ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋಗೆ ಅನುಮತಿ

              ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ 18ರಂದು ಕೊಯಮತ್ತೂರಿನಲ್ಲಿ ನಡೆಸಲಿರುವ ನಾಲ್ಕು ಕಿ.ಮೀ ರೋಡ್‌ ಶೋಗೆ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಮದ್ರಾಸ್‌ ಹೈಕೋರ್ಟ್‌, ಪೊಲೀಸರಿಗೆ ಸೂಚಿಸಿದೆ.

                ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಭದ್ರತಾ ಕಾರಣಗಳನ್ನು ನೀಡಿ ಪೊಲೀಸರು ಪ್ರಧಾನಿ ರೋಡ್‌ ಶೋಗೆ ಅನುಮತಿ ನಿರಾಕರಿಸಿದ್ದರು.

               ಇದನ್ನು ಪ್ರಶ್ನಿಸಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಜೆ. ರಮೇಶ್‌ ಕುಮಾರ್‌ ಹೈಕೋರ್ಟ್‌ ಮೊರೆ ಹೋಗಿದ್ದರು.

              'ರಾಜಕೀಯ ಕಾರಣಕ್ಕಾಗಿ ರೋಡ್‌ ಶೋಗೆ ಅನುಮತಿ ನಿರಾಕರಿಸಲಾಗಿದೆ. ಇದು ಸಮಂಜಸವಲ್ಲ. ಸಂವಿಧಾನದ 19ನೇ ವಿಧಿಯಡಿ ಖಾತರಿಪಡಿಸಲಾಗಿರುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ' ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದರು.

               ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್‌. ಆನಂದ್‌ ವೆಂಕಟೇಶ್‌ ಅವರು, ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಆರ್‌.ಎಸ್‌.ಪುರಂ ವಲಯದ ಸಹಾಯಕ ಪೊಲೀಸ್‌ ಆಯುಕ್ತರಿಗೆ ನಿರ್ದೇಶನ ನೀಡಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries