HEALTH TIPS

ಮೊದಲ ಹಂತದ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ

                ವದೆಹಲಿ: ದೇಶದ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗಾಗಿ ಏಪ್ರಿಲ್ 19ರಂದು ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣೆಗೆ ಬುಧವಾರ ಅಧಿಸೂಚನೆ ಹೊರಡಿಸುವುದರೊಂದಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.

               ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾರ್ಚ್ 27 ಕೊನೆಯ ದಿನವಾಗಿದೆ.

            ಮಾರ್ಚ್ 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಮಾರ್ಚ್ 30 ಕೊನೆಯ ದಿನವಾಗಿದೆ.

              ಬಿಹಾರದಲ್ಲಿ ಮಾತ್ರ ಹಬ್ಬದ ಕಾರಣಕ್ಕೆ ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಗೆ ಮಾರ್ಚ್ 28 ಕೊನೆಯ ದಿನವಾಗಿದೆ. ಬಿಹಾರದಲ್ಲಿ ಮಾರ್ಚ್ 30ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 2 ಕೊನೆಯ ದಿನವಾಗಿದೆ.

                  ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ಮತದಾನ ನಡೆಯಲಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries