ಕಾಸರಗೋಡು: ಜಿಲ್ಲೆಯ ಎರಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ದುರುಳ ತಂದೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೊಬ್ಬನ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 14ರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಬಾಲಕಿ ತಂದೆ ಹಾಗೂ ಈತನ ಸಂಬಂಧಿಯಾದ 22ರ ಹರೆಯದ ಯುವಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಇಬ್ಬರನ್ನೂ ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಇನ್ನೊಂದುಪ್ರಕರಣದಲ್ಲಿ ಕಾಞಂಗಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಂಗನವಾಡಿಯಲ್ಲಿ ಕಲಿಯುತ್ತಿರುವ ಐದರ ಹರೆಯದ ಬಾಲಕಿಗೆ ಕಿರಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ, ಬಾಲಕಿ ಸಂಬಂಧಿಕನೂ ಆಗಿರುವ ವೃದ್ಧನ ವಿರುದ್ಧ ಪೊಲೀಸರು ಪೋಕ್ಸೋ ಅನ್ವಯ ಕೇಸು ದಾಖಲಿಸಿಕೊಂಡಿದ್ದಾರೆ.

