ಕಾಸರಗೋಡು: ಪರಿಶಿಷ್ಟ ವರ್ಗ ಅಭಿವೃದ್ಧಿ ಇಲಾಖೆ ಜಾರಿಗೊಳಿಸುವ ಪರಿಶಿಷ್ಟ ವರ್ಗಕ್ಕೆ ಸೇರಿದ ಯುವತಿಯರಿಗೆ ಮತ್ತು ಯುವಕರಿಗೆ ಬ್ಯಾಂಕಿಂಗ್ ಸರ್ವೀಸ್, ಯುಪಿಎಸ್‍ಸಿ, ಎಸ್‍ಎಸ್‍ಸಿ, ಕೇರಳ ಪಬ್ಲಿಕ್ ಸರ್ವೀಸ್ ಕಮೀಷನ್ ಮುಂತಾದ ಸಂಸ್ಥೆಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಅಗತ್ಯ ತರಬೇತಿ ನೀಡಲು ಪರಿಶಿಷ್ಟ ವರ್ಗದ ಅಭ್ಯರ್ಥಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹೈಯರ್ ಸೆಕೆಂಡರಿ, ಡಿಪೆÇ್ಲಮಾ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯಾಗಿದ್ದು, 30 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸರ್ಜಿ ಸಲ್ಲಿಸಬಹುದು. ವಾರ್ಷಿಕ ಆದಾಯ 2.5 ಲಕ್ಷ ರೂ. ನಿಗದಿಪಡಿಸಲಾಗಿದೆ. ಎಲ್ಲಾ ತರಬೇತಿ ಕಾರ್ಯಕ್ರಮಗಳಿಗೆ ಗರಿಷ್ಠ 250 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನಿಗದಿತ ಸಂಖ್ಯೆಗಿಂತ ಹೆಚ್ಚು ಅರ್ಜಿದಾರರಿದ್ದಲ್ಲಿ ಲಿಖಿತ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 20 ರಂದು ಟ್ರೈಬಲ್ ಡೆವೆಲಪ್‍ಮೆಂಟ್ ಆಫೀಸ್, ಟ್ರೈಬಲ್ ಎಕ್ಸ್ ಟೆನ್ಶನ್ ಆಫೀಸ್‍ಗಳಿಂದ ಪಡೆದ ಅರ್ಜಿಯೊಂದಿಗೆ ಅರ್ಹತೆ, ಜಾತಿ ಮತ್ತು ಜನ್ಮ ದಿನಾಂಕವನ್ನು ಸಾಬೀತುಪಡಿಸುವ ದಾಖಲೆಗಳ ಪ್ರತಿಗಳೊಂದಿಗೆ ಡೈರೆಕ್ಟರ್, ಪರಿಶಿಷ್ಟ ವರ್ಗ ಅಭಿವೃದ್ಧಿ ಇಲಾಖೆ, 4ನೇ ಮಹಡಿ, ವಿಕಾಸ್ ಭವನ್, ತಿರುವನಂತಪುರಂ-695033 ಎಂಬ ವಿಳಾಸಕ್ಕೆ ಕಳುಹಿಸಬೇಕು. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ (04994 255466, 9496070343)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.




