ತಿರುವನಂತಪುರಂ: ರಾಜ್ಯದ ಐದು ಜಿಲ್ಲೆಗಳಲ್ಲಿ ಭಾನುವಾರದವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಉಷ್ಣತೆ ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು ಎಂದು ಎಚ್ಚರಿಕೆ ನೀಡಿದೆ.
ಪಾಲಕ್ಕಾಡ್, ಕೊಲ್ಲಂ, ಪತ್ತನಂತಿಟ್ಟ, ತಿರುವನಂತಪುರಂ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಪಾಲಕ್ಕಾಡ್‍ನಲ್ಲಿ 39 ಡಿಗ್ರಿ ಸೆಲ್ಸಿಯಸ್, ಕೊಲ್ಲಂನಲ್ಲಿ 38 ಡಿಗ್ರಿ ಸೆಲ್ಸಿಯಸ್, ಪತ್ತನಂತಿಟ್ಟದಲ್ಲಿ 37 ಡಿಗ್ರಿ ಸೆಲ್ಸಿಯಸ್ ಮತ್ತು ತಿರುವನಂತಪುರಂ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ 36 ಡಿಗ್ರಿ ಸೆಲ್ಸಿಯಸ್‍ಗೆ ಏರಿಕೆಯಾಗುವ ಸಾಧ್ಯತೆಯಿದೆ.
ಹೆಚ್ಚಿನ ಶಾಖವು ನಿರ್ಜಲೀಕರಣದಂತಹ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ.


