ಸಮರಸ ಚಿತ್ರಸುದ್ದಿ: ಬದಿಯಡ್ಕ: ಕುಂಟಿಕಾನಮಠ ಶ್ರೀ ಶಂಕರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಕಾರಿ ರಾಜರ್ಷಿ ಡಾ. ಡಿ. ವೀರೇಂದ್ರಹೆಗ್ಗಡೆಯವರಿಗೆ ನೀಡಲಾಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಬಿ.ವಸಂತ ಪೈ ಬದಿಯಡ್ಕ, ಉಪಾಧ್ಯಕ್ಷ ಎಂ.ವಿ.ಮಹಾಲಿಂಗೇಶ್ವರ ಭಟ್, ಗೋಪಾಲಕೃಷ್ಣ ಭಟ್ ಕುಂಟಿಕಾನಮಠ, ಶಂಕರನಾರಾಯಣ ಶರ್ಮ ಕುಂಟಿಕಾನ ಮಾಳಿಗೆಮನೆ, ವಿಷ್ಣುಶರ್ಮ ನೂಜಿಲ ಜೊತೆಗಿದ್ದರು. ಏಪ್ರಿಲ್ 21ರಿಂದ 26ರ ತನಕ ಬ್ರಹ್ಮಕಲಶೋತ್ಸವವು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು.

.jpg)
