ನವದೆಹಲಿ: ಇತ್ತೀಚೆಗೆ ದೆಹಲಿ ಜಲ ಮಂಡಳಿಯ 40 ಅಡಿ ಆಳದ ಕೊಳವೆಬಾವಿಗೆ ಬಿದ್ದು ಮೃತಪಟ್ಟಿರುವ ವ್ಯಕ್ತಿಯು ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸುವಾಗ ದುರ್ಘಟನೆ ನಡೆದಿದೆ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.
0
samarasasudhi
ಮಾರ್ಚ್ 13, 2024
ನವದೆಹಲಿ: ಇತ್ತೀಚೆಗೆ ದೆಹಲಿ ಜಲ ಮಂಡಳಿಯ 40 ಅಡಿ ಆಳದ ಕೊಳವೆಬಾವಿಗೆ ಬಿದ್ದು ಮೃತಪಟ್ಟಿರುವ ವ್ಯಕ್ತಿಯು ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸುವಾಗ ದುರ್ಘಟನೆ ನಡೆದಿದೆ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.
ಭಾನುವಾರ ಬೆಳಗಿನ ಜಾವ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ವ್ಯಕ್ತಿಯನ್ನು ಇಬ್ಬರು ವ್ಯಕ್ತಿಗಳು ಸ್ಕೂಟಿ ವಾಹನದಲ್ಲಿ ಹಿಂಬಾಲಿಸುತ್ತಿದ್ದರು.
ಭಾನುವಾರ ಬೆಳ್ಳಂಬೆಳಗ್ಗೆ ವ್ಯಕ್ತಿಯು ಕೊಳವೆಬಾವಿಗೆ ಬಿದ್ದಿದ್ದ. ಎನ್‌ಡಿಆರ್‌ಎಫ್ ಮತ್ತು ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿಯ 14 ಗಂಟೆಗಳ ನಿರಂತರ ಕಾರ್ಯಾಚರಣೆ ಮೂಲಕ ಆ ವ್ಯಕ್ತಿಯ ಮೃತದೇಹವನ್ನು ಹೊರತೆಗೆಯಲಾಗಿತ್ತು.