ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
0
samarasasudhi
ಮಾರ್ಚ್ 22, 2024
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎಂಎಂ ಸುಂದ್ರೇಶ್ ಮತ್ತು ಬೇಲಾ ಎಂ. ತ್ರಿವೇದಿ ಅವರಿದ್ದ ವಿಭಾಗೀಯ ಪೀಠವು ಕವಿತಾ ಅವರಿಗೆ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಸೂಚಿಸಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರನ್ನು ಮಾರ್ಚ್ 15 ರಂದು ಬಂಧಿಸಲಾಗಿತ್ತು. ಬಳಿಕ ಮಾರ್ಚ್ 23 ರವರೆಗೆ ಇ.ಡಿ ಕಸ್ಟಡಿಗೆ ನೀಡಲಾಗಿದೆ. ಇ.ಡಿ ಬಂಧನವನ್ನು ಪ್ರಶ್ನಿಸಿ ಕವಿತಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.