ಕಾಸರಗೋಡು: ದೇಳಿ ಸಅದಿಯಾ ಶಿಕ್ಷಣ ಸಂಸ್ಥೆಯ ಎಸ್ಸೆಸೆಲ್ಸಿ ವಿದ್ಯಾರ್ಥಿನಿ, ಪುತ್ತೂರು ಕುದ್ಮಾರು ನಿವಾಸಿ ಕುಞÂಮೋನು ಎಂಬವರ ಪುತ್ರಿ ಫಾತಿಮಾ ಫರಿಯಾ(15)ಹೊಟ್ಟೆನೋವಿನಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾಳೆ. ಬುಧವಾರ ಬೆಳಗ್ಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರೂ, ಶಾಲೆಗೆ ತೆರಳಿ ಪರೀಕ್ಷೆ ಬರೆದಿದ್ದಳು, ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಈಕೆಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಶಾಲಾ ಕೊಠಡಿಯಲ್ಲಿ ಏರ್ಪಡಿಸಲಾಗಿತ್ತು. ಸಂಜೆ ವೇಳೆಗೆ ಹೊಟ್ಟೆನೋವು ಜೋರಾದ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿರಲಿಲ್ಲ.

