HEALTH TIPS

ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಎನ್‌ಕೌಂಟರ್‌: ನಾಲ್ವರು ನಕ್ಸಲರ ಹತ್ಯೆ

 ​            ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ನಾಲ್ವರು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

             ಮುಂಬರುವ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಉದ್ದೇಶದಿಂದ ಕೆಲ ನಕ್ಸಲರು ನೆರೆಯ ತೆಲಂಗಾಣದಿಂದ ಪ್ರಾಣಹಿತ ನದಿ ದಾಟಿ ಗಡ್ಚಿರೋಲಿಗೆ ಪ್ರವೇಶಿಸಿದ್ದಾರೆ ಎಂಬ ಮಾಹಿತಿ ಸೋಮವಾರ ಮಧ್ಯಾಹ್ನ ಪೊಲೀಸರಿಗೆ ಲಭಿಸಿತ್ತು.

              ಹೀಗಾಗಿ ಮಹಾರಾಷ್ಟ್ರ ಪೊಲೀಸರ ವಿಶೇಷ ಸಿ-60 ಕಮಾಂಡೋಗಳು ಮತ್ತು ಸಿಆರ್‌ಪಿಎಫ್ ಕಮಾಂಡೋಗಳು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ನೀಲೋತ್ಪಾಲ್ ತಿಳಿಸಿದ್ದಾರೆ.

              ಸಿ-60 ಘಟಕದ ತಂಡ ಮಂಗಳವಾರ ಬೆಳಿಗ್ಗೆ ಕೋಲಮಾರ್ಕ ಪರ್ವತಗಳಲ್ಲಿ ಶೋಧ ನಡೆಸುತ್ತಿದ್ದಾಗ ನಕ್ಸಲರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ. ಘಟನೆಯಲ್ಲಿ ನಾಲ್ವರು ನಕ್ಸಲರನ್ನು ಹತ್ಯೆಗೈಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮೃತ ನಕ್ಸಲರನ್ನು ವಿವಿಧ ನಕ್ಸಲ್ ಸಮಿತಿಗಳ ಕಾರ್ಯದರ್ಶಿಗಳಾದ ವರ್ಗೀಶ್, ಮಾಗ್ತು ಮತ್ತು ಪ್ಲಾಟೂನ್ ಸದಸ್ಯರಾದ ಕುರ್ಸಂಗ್ ರಾಜು ಮತ್ತು ಕುಡಿಮೆಟ್ಟ ವೆಂಕಟೇಶ್ ಎಂದು ಗುರುತಿಸಲಾಗಿದೆ. ಇವರನ್ನು ಹಿಡಿದುಕೊಟ್ಟವರಿಗೆ ₹36 ಲಕ್ಷ ಬಹುಮಾನ ಘೋಷಿಸಲಾಗಿತ್ತು.

                 ನಕ್ಸಲರಿಂದ ಎಕೆ 47 ರೈಫಲ್, ಎರಡು ದೇಶ ನಿರ್ಮಿತ ಪಿಸ್ತೂಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries