HEALTH TIPS

`ಕೇರಳ-ಕರ್ನಾಟಕ ಕನ್ನಡ ಸಂಸ್ಕøತಿ ಉತ್ಸವ': ಗಡಿನಾಡಿನಲ್ಲಿ ಸಾಹಿತ್ಯ ಸಂಸ್ಕøತಿ ಸಂವರ್ಧನೆಗೆ ಸಂಘ ಸಂಸ್ಥೆಗಳ ಪಾತ್ರ ಹಿರಿದು:ರಾಧಾಕೃಷ್ಣ ಕೆ.ಉಳಿಯತ್ತಡ್ಕ

        

                       ಕಾಸರಗೋಡು: ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಸಾಹಿತ್ಯ, ಸಂಸ್ಕøತಿ ಸಂವರ್ಧನೆಗೆ ಇಲ್ಲಿನ ಸಂಘ ಸಂಸ್ಥೆಗಳ ಪಾತ್ರ ಹಿರಿದು ಎಂದು ಗಡಿನಾಡ ಚೇತನ ಪ್ರಶಸ್ತಿ ಪುರಸ್ಕøತ ಹಿರಿಯ ಕವಿ, ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಹೇಳಿದ್ದಾರೆ.

                        ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ, ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯದ ಕಥಾ ಬಿಂದು ಸಾಹಿತ್ಯ ಸಾಂಸ್ಕøತಿಕ ವೇದಿಕೆ, ಕಥಾ ಬಿಂದು  ಪ್ರಕಾಶನ ಇದರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಭವನ ಬಯಲು ರಂಗಮಂಟಪದಲ್ಲಿ ಭಾನುವಾರ ನಡೆದ `ಕೇರಳ-ಕರ್ನಾಟಕ ಕನ್ನಡ ಸಂಸ್ಕøತಿ ಉತ್ಸವ'ದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

                   ಕನ್ನಡ ಭವನ ಗ್ರಂಥಾಲಯವು ಅನೇಕ ಪ್ರತಿಭೆಗಳನ್ನು ಬೆಳಕಿಗೆ ತಂದಿದೆ. ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಾ ಬಂದಿದೆ. ಇದು ಸ್ತುತ್ಯರ್ಹ ಕೆಲಸ ಎಂದು ಹೇಳಿದರು.


               ಸಮಾರಂಭವನ್ನು ಪಿ.ವಿ.ಪ್ರದೀಪ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಾಹಿತಿ ವಿ.ಬಿ.ಕುಳಮರ್ವ, ಕರ್ನಾಟಕ ಜಾನಪದ ಪರಿಷತ್ ಕೇರಳ ರಾಜ್ಯ ಘಟಕ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಸಾಹಿತಿ ಕೊಳ್ಚಪ್ಪೆ ಗೋವಿಂದ ಭಟ್, ಸಂಧ್ಯಾರಾಣಿ ಟೀಚರ್, ಪ್ರೊ.ಎ.ಶ್ರೀನಾಥ್ ಕಾಸರಗೋಡು, ಸಾಹಿತಿ ಬಿ.ಸತ್ಯವತಿ ಭಟ್ ಕೊಳಚಪ್ಪು, ಧಾರ್ಮಿಕ ಮುಂದಾಳು ಕೆ.ಎನ್.ವೆಂಕಟ್ರಮಣ ಹೊಳ್ಳ ಮೊದಲಾದವರು  ಉಪಸ್ಥಿತರಿದ್ದರು.   


               ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆ, ವಿವಿಧ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ, ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಿತು. ಕನ್ನಡ ಭವನ ಸ್ಥಾಪಕ ಅಧ್ಯಕ್ಷ ವಾಮನ ರಾವ್ ಬೇಕಲ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಾಹಿತ್ಯ ಪರಿಷತ್ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.  



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries