HEALTH TIPS

ಹಿರಿಯ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕರಿಗೆ ಕಸಾಪದಿಂದ ಸನ್ಮಾನ

                ಮಂಜೇಶ್ವರ: ಕರ್ನಾಟಕ ಸರ್ಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಗಡಿನಾಡ ಚೇತನ ಪ್ರಶಸ್ತಿಗೆ ಭಾಜನರಾದ ಹಿರಿಯ ಕವಿ, ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅವರನ್ನು ಕನ್ನಡ ಸಾಹಿತ್ಯ ಪರಿಷತ್‍ನ ಕೇರಳ ಗಡಿನಾಡ ಘಟಕದ ವತಿಯಿಂದ ಅಭಿನಂದಿಸಲಾಯಿತು.

                 ರಾಷ್ಟ್ರಕವಿ ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸÀರ್ಕಾರಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಧಾಕೃಷ್ಣಕೆ.ಕೆ. ಉಳಿಯತ್ತಡ್ಕ ಅವರಿಗೆ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

             ಕನ್ನಡ ಸಾಹಿತ್ಯ ಪರಿಷತ್‍ನ ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಸಾಹಿತ್ಯಕ್ಕೆ ಮತ್ತು ಕಾಸರಗೋಡಿಗೆ ರಾಧಾಕೃಷ್ಣರು ನೀಡಿದ ಕೊಡುಗೆ ಮಹತ್ತರವಾದುದು ಎಂದರು.

             ಕನ್ನಡ ಸಾಹಿತ್ಯ ಪರಿಷತ್‍ನ ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಅಭಿನಂದನಾ ಭಾಷಣ ಮಾಡಿದರು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷ ಪ್ರೊ.ಪಿ.ಎನ್. ಮೂಡಿತ್ತಾಯ, ಮಂಜೇಶ್ವರ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಮೊಹಮ್ಮದ್ ಆಲಿ ಕೆ., ಕನ್ನಡ ವಿಭಾಗ ಮುಖ್ಯಸ್ಥ ಶಿವಶಂಕರ ಪಿ., ಕಸಾಪ ಗಡಿನಾಡ ಘಟಕದ ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು, ಆಗ್ನೆಯ ಸಾಯಿ, ದಿನೇಶ್ ಕೆ.ಎಸ್., ಉಪನ್ಯಾಸಕರಾದ ಜಯಂತಿ ಕೆ., ಡಾ.ಸುಜೇಶ್ ಎಸ್. ಮೊದಲಾದವರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries