ನವದೆಹಲಿ: ಜೆಎಂಎಂ ಲಂಚ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಅದ್ಬುತವಾದುದ್ದಾಗಿದೆ. ಇದು ಶುದ್ಧ ರಾಜಕಾರಣವನ್ನು ಖಚಿತಪಡಿಸುತ್ತದೆ ಮತ್ತು ವ್ಯವಸ್ಥೆ ಮೇಲೆ ಜನರ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
0
samarasasudhi
ಮಾರ್ಚ್ 05, 2024
ನವದೆಹಲಿ: ಜೆಎಂಎಂ ಲಂಚ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಅದ್ಬುತವಾದುದ್ದಾಗಿದೆ. ಇದು ಶುದ್ಧ ರಾಜಕಾರಣವನ್ನು ಖಚಿತಪಡಿಸುತ್ತದೆ ಮತ್ತು ವ್ಯವಸ್ಥೆ ಮೇಲೆ ಜನರ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಶಾಸನ ಸಭೆಯಲ್ಲಿ ಮತ ಹಾಕಲು ಅಥವಾ ಪ್ರಶ್ನೆ ಕೇಳಲು ಲಂಚ ಪಡೆಯುವ ಜನಪ್ರತಿನಿಧಿಗಳಿಗೆ ಕಾನೂನಿನ ವಿನಾಯಿತಿ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಂಸತ್ತಿನಲ್ಲಿ ಮತ ಚಲಾಯಿಸಲು ಮತ್ತು ಮಾತನಾಡಲು ಲಂಚ ಪಡೆದುಕೊಂಡ ಸಂಸದರಿಗೆ ಕಾನೂನು ಕ್ರಮದಿಂದ ವಿನಾಯಿತಿ ಇದೆ ಎಂದು 1998ರಲ್ಲಿ ಜೆಎಂಎಂ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಐದು ಸದಸ್ಯರ ಪೀಠ ಹೇಳಿತ್ತು. ಆ ತೀರ್ಪನ್ನು ಇಂದು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಲಂಚ ಪಡೆದು ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮತ ಚಲಾಯಿಸುವುದು ಮತ್ತು ಭಾಷಣ ಮಾಡುವುದು ಅಪರಾಧ ಎಂದು ಏಳು ನ್ಯಾಯಮೂರ್ತಿಗಳ ಪೀಠವು ಈಗ ತೀರ್ಪು ನೀಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮೋದಿ, 'ಸ್ವಾಗತಂ.. ಸುಪ್ರೀಂ ಕೋರ್ಟ್‌ನಿಂದ ಒಂದು ಅದ್ಭುತ ತೀರ್ಪು.. ಇದು ಶುದ್ಧ ರಾಜಕಾರಣವನ್ನು ಖಚಿತಪಡಿಸುತ್ತದೆ ಮತ್ತು ವ್ಯವಸ್ಥೆ ಮೇಲೆ ಜನರಿಗೆ ನಂಬಿಕೆಯನ್ನು ಹೆಚ್ಚಿಸುತ್ತದೆ' ಎಂದು ಎಕ್ಸ್ ಪೋಸ್ಟ್‌ನಲ್ಲಿ ಮೋದಿ ಹೇಳಿದ್ದಾರೆ.