ತಿರುವನಂತಪುರಂ: ರಾಜಧಾನಿಯ ಪ್ರಮುಖ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸ್ಪೋಟ್ರ್ಸ್ ಕೌನ್ಸಿಲ್ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ನಾಯಕಿ ಪದ್ಮಿನಿ ಥಾಮಸ್ ಹಾಗೂ ಡಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ತಂಬಾನೂರು ಸತೀಶ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಯುಡಿಎಫ್ ಸರ್ಕಾರದ ಅವಧಿಯಲ್ಲಿ ಪದ್ಮಿನಿ ಥಾಮಸ್ ಕ್ರೀಡಾ ಮಂಡಳಿಯ ಅಧ್ಯಕ್ಷರಾಗಿದ್ದರು. ಇವರೊಂದಿಗೆ ಅವರ ಪುತ್ರ ಕೂಡ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಕಾಂಗ್ರೆಸ್ ನಾಯಕತ್ವದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ತಂಬಾನೂರು ಸತೀಶ್ ರಾಜೀನಾಮೆ ನೀಡಿದ್ದರು. ನಂತರ ಬಿಜೆಪಿಗೆ ಸೇರ್ಪಡೆಗೊಂಡರು. ಅಲ್ಲದೆ ಡಿಸಿಸಿ ಮಾಜಿ ಪದಾಧಿಕಾರಿಗಳು ಕೂಡ ಬಿಜೆಪಿ ಸದಸ್ಯತ್ವ ಸ್ವೀಕರಿಸಿದ್ದಾರೆ.
ನೂತನವಾಗಿ ಉದ್ಘಾಟನೆಗೊಂಡ ಬಿಜೆಪಿ ಚುನಾವಣಾ ಸಮಿತಿ ಕಚೇರಿಗೆ ಭೇಟಿ ನೀಡಿ ಮುಖಂಡರು ಸದಸ್ಯತ್ವ ಸ್ವೀಕರಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಅವರೊಂದಿಗೆ ಪಕ್ಷದ ಕಚೇರಿಗೆ ಬಂದರು. ಕೇಂದ್ರ ಸಚಿವ ಹಾಗೂ ತಿರುವನಂತಪುರಂ ಎನ್‍ಡಿಎ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಉಪಸ್ಥಿತರಿದ್ದರು.


