ಕಾಸರಗೋಡು: ಮೊಗ್ರಾಲ್ ಪುತ್ತೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಹೈಕೋರ್ಟ್ ಆದೇಶ ಉಲ್ಲಂಘಿಸಿ ಅನಧಿಕೃತವಾಗಿ ಸ್ಥಾಪಿಸಲ್ಪಟ್ಟ ಜಾಹೀರಾತು ಫಲಕ, ಬ್ಯಾನರ್, ತೋರಣಗಳನ್ನು ಮಾರ್ಚ್ 10ರೊಳಗೆ ತೆರವುಗೊಳಿಸುವಂತೆ ಸೂಚಿಸಲಾಗಿದೆ. ಆದೇಶ ಉಲ್ಲಂಘಿಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ಅಗತ್ಯ ಕ್ರಮ ಕಐಗೊಳ್ಳುವುದಾಗಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




