ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ನಯೀಮ್ ಅಹಮದ್ ಖಾನ್ ನೇತೃತ್ವದ 'ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್' (JKNF )ಸಂಘಟನೆಯನ್ನು ಐದು ವರ್ಷಗಳ ಕಾಲ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
0
samarasasudhi
ಮಾರ್ಚ್ 13, 2024
ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ನಯೀಮ್ ಅಹಮದ್ ಖಾನ್ ನೇತೃತ್ವದ 'ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್' (JKNF )ಸಂಘಟನೆಯನ್ನು ಐದು ವರ್ಷಗಳ ಕಾಲ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಗೃಹ ಸಚಿವಾಲಯ ಈ ಕುರಿತು ಪ್ರಕಟಣೆ ಹೊರಡಿಸಿದ್ದು, 'ತಕ್ಷಣವೇ ಜಾರಿಗೆ ಬರುವಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ JKNF ಅನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗುತ್ತದೆ.
ಪ್ರತ್ಯೇಕತಾವಾದವನ್ನು ಉತ್ತೇಜಿಸಲು ಭಾರತ ವಿರೋಧಿ ಪ್ರಚಾರ ಮಾಡುವ ಮತ್ತು ಉಗ್ರ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿದೆ. ಹೀಗಾಗಿ ಸಂಘಟನೆಯನ್ನು ನಿಷೇಧಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಭಾರತದ ಜನರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಾವು ಭಯೋತ್ಪಾದಕ ಶಕ್ತಿಗಳನ್ನು ಬೇರುಸಹಿತ ಕಿತ್ತೊಗೆಯಲು ಬದ್ಧರಾಗಿದ್ದೇವೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.