HEALTH TIPS

ಲೋಕಸಭಾ ಚುನಾವಣೆ- ಇಂದಿನಿಂದ ನಾಮಪತ್ರ ಸಲ್ಲಿಕೆ: ಮಾರ್ಗಸೂಚಿ ಪಾಲಿಸಲು ಜಿಲ್ಲಾಧಿಕಾರಿ ಸೂಚನೆ

                   ಕಾಸರಗೋಡು : ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾ. 28ರಂದು ಆರಂಭಗೊಳ್ಳಲಿದ್ದು,  ಆಯೋಗವು ನಿಗದಿಪಡಿಸಿದ ಮಾನದಂಡಗಳ ಪ್ರಕಾರ ಮಾರ್ಚ್ 29, 31 ಮತ್ತು ಏಪ್ರಿಲ್ 1ರ ಸಾರ್ವಜನಿಕ ರಜಾದಿನಗಳನ್ನು ಹೊರತುಪಡಿಸಿ ನಾಮಪತ್ರ ಸಲ್ಲಿಸಬಹುದು ಎಂದು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಕಾಸರಗೋಡು ಜಿಲ್ಲಾಧಿಕಾರಿ ಕೆ. ಇನ್‍ಬಾಶೇಖರ್ ಮಾಹಿತಿ ನೀಡಿದ್ದಾರೆ.

                   ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ನಾಮಪತ್ರ ಸಲ್ಲಿಕೆಗೆ ಸಮಯ ನಿಗದಿಪಡಿಸಲಾಗಿದ್ದು, ನಾಮಪತ್ರಗಳನ್ನು ಜಿಲ್ಲಾ ಚುನಾವಣಾಧಿಕಾರಿ ಅಥವಾ ಸಹಾಯಕ ಜಿಲ್ಲಾಧಿಕಾರಿ ಆರ್‍ಆರ್‍ಪಿ ಶಾಜು ಅವರಿಗೆ ಸಲ್ಲಿಸಬಹುದು. ಅಭ್ಯರ್ಥಿಯು ಗರಿಷ್ಠ ನಾಲ್ಕು ಸೆಟ್ ನಾಮಪತ್ರ ಸಲ್ಲಿಸಬಹುದು. ನಾಮಪತ್ರಗಳು ಮತ್ತು ಸಂಬಂಧಿತ ನಮೂನೆಗಳು ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಲಭ್ಯವಿರಲಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಅಭ್ಯರ್ಥಿ ಸೇರಿದಂತೆ ಐವರಿಗೆ ಮಾತ್ರ ಚುನಾವಣಾಧಿಕಾರಿ ಕಚೇರಿ ಪ್ರವೇಶಿಸಲು ಅವಕಾಶವಿದೆ. ಚುನಾವಣಾಧಿಕಾರಿಗಳ ಕಚೇರಿಯಿಂದ 100 ಮೀಟರ್ ವ್ಯಾಪ್ತಿಯಲ್ಲಿ ಅಭ್ಯರ್ಥಿಗಳ ಗರಿಷ್ಠ ಮೂರು ವಾಹನಗಳಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ. 

               ಅಭ್ಯರ್ಥಿಗಳು ಸಾಮಾನ್ಯ ವರ್ಗಕ್ಕೆ 25000 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 12500 ರೂ. ನಿಗದಿಪಡಿಸಲಾಗಿದ್ದು, ಈ ರಿಯಾಯಿತಿಗಾಗಿ ಸಂಬಂಧಪಟ್ಟ ಇಲಾಖೆಯಿಂದ ಜಾತಿ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯವಾಗಿದೆ.

                ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ದಿನಾಂಕದ ಮೊದಲು ಚುನಾವಣಾ ಉದ್ದೇಶಗಳಿಗಾಗಿ ಪ್ರತ್ಯೇಕ ಬ್ಯಾಂಕ್ ಖಾತೆಯನ್ನು ತೆರೆದು, ಚುನಾವಣಾ ಖರ್ಚುವೆಚ್ಚಗಳನ್ನು  ಈ ಮೂಲಕವೇ ನಿಭಾಯಿಸಬೇಕಾಗಿದೆ. ಏ. 5ರಂದು ನಾಮಪತ್ರ ಸೂಕ್ಷ್ಮ ಪರಿಶೋಧನೆ ಮತ್ತು8ರಂದು ನಾಮಪತ್ರ ಹಿಂಪಡೆಯಲಿರುವ ಕೊನೆ ದಿನಾಂಕವಾಗಿರುತ್ತದೆ.   ಚುನಾವಣಾಧಿಕಾರಿ ಕಚೇರಿ ಆವರಣದಲ್ಲಿ ಅಗತ್ಯ ಪೆÇಲೀಸ್ ಸಿಬ್ಬಂದಿಯನ್ನು ನಿಯೋಜಿಲಾಗಿದ್ದು,  ನಾಮಪತ್ರ ಸಲ್ಲಿಕೆಗೆ ಬರುವವರು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries