ಕೋಝಿಕ್ಕೋಡ್: ಕೇರಳದಲ್ಲಿ ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭೆ ಚುನಾವಣೆ ದಿನಾಂಕವನ್ನು ಮರು ನಿಗದಿಪಡಿಸಲು ಸಮಸ್ತ ಕೇರಳ ಜಮೀಯತುಲ್ ಉಲೇಮಾ ಒತ್ತಾಯಿಸಿದೆ.
ಶುಕ್ರವಾರ ಮಧ್ಯಾಹ್ನ ಮುಸ್ಲಿಮರು ಜುಮಾ ಪ್ರಾರ್ಥನೆ ನಿರ್ವಹಿಸುವರು. ಶುಕ್ರವಾರದ ಮತದಾನದಿಂದ ಮತದಾರರಿಗೆ ಹಾಗೂ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳಿಗೆ ಸಾಕಷ್ಟು ತೊಂದರೆಯಾಗಲಿದೆ. ಮತ್ತು ಇದು ಪೋಲಿಂಗ್ ಮೇಲೂ ಪರಿಣಾಮ ಬೀರುತ್ತದೆ.
ಜಮೀಯ್ಯತುಲ್ ಉಲಮಾ ಅಧ್ಯಕ್ಷ ಸೈಯದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಮತ್ತು ಪ್ರಧಾನ ಕಾರ್ಯದರ್ಶಿ ಪ್ರೊ. ಕೆ. ಆಲಿಕುಟ್ಟಿ ಮುಸ್ಲಿಯಾರ್ ಈ ಬಗ್ಗೆ ದಿನಾಂಕ ಬದಲಾವಣೆಗೆ ಆಗ್ರಹಿಸಿದ್ದಾರೆ. . ಈ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ಇ-ಮೇಲ್ ಕಳುಹಿಸಲಾಗಿದೆ ಎಂದು ಸಮಸ್ತ ತಿಳಿಸಿದೆ.


