HEALTH TIPS

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಪತ್ನಿಗೆ ಸೇರಿದ ಕಾರು ಕಳ್ಳತನ!

             ವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ಪತ್ನಿಗೆ ಸೇರಿದ ಕಾರನ್ನು ದೆಹಲಿಯ ಗೋವಿಂದಪುರಿಯಲ್ಲಿ ಕಳ್ಳತನವಾಗಿದೆ ಎನ್ನಲಾಗಿದೆ.

              ಮಾರ್ಚ್‌ 19ರಂದು ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಉಲ್ಲೇಖಿಸಿ ಎನ್‌ಡಿ ಟಿವಿ ವರದಿ ಮಾಡಿದೆ. ಜೆ.ಪಿ. ನಡ್ಡಾ ಅವರ ಪತ್ನಿಗೆ ಸೇರಿದೆ ಎನ್ನಲಾದ ಟೊಯೊಟಾ ಫಾರ್ಚ್ಯೂನರ್ ಕಾರನ್ನು, ಚಾಲಕ ಗೋವಿಂದಪುರಿಯ ತಮ್ಮ ನಿವಾಸದ ಬಳಿ ನಿಲ್ಲಿಸಿದ್ದರು. ಊಟ ಮುಗಿಸಿ ಬರುವಷ್ಟರಲ್ಲಿ ಕಾರು ಕಳ್ಳತನವಾಗಿದೆ ಎಂದು ವರದಿಯಾಗಿದೆ.

              'ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕದ್ದ ಕಾರು ಗುರುಗ್ರಾಮ ಕಡೆಗೆ ಹೋಗುತ್ತಿರುವುದು ಕಂಡುಬಂದಿದೆ. ಆದರೆ, ಈವರೆಗೂ ಕಾರಿನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ' ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.

               ಕಳ್ಳತನವಾಗಿರುವ ಟೊಯೊಟಾ ಫಾರ್ಚ್ಯೂನರ್ ಕಾರು ಹಿಮಾಚಲ ಪ್ರದೇಶದ ನೋಂದಣಿ ಸಂಖ್ಯೆ ಹೊಂದಿದೆ.

               ಕಳ್ಳತನವಾದ ಕಾರನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries